ದಾವಣಗೆರೆ, (ಜುಲೈ.08): ಡೆಂಘಿ ಜ್ವರದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ದಾವಣಗೆರೆಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ
ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ 14 ವರ್ಷದ ಬಾಲಕ ಧನು ಅಡಿವೆಪ್ಪ ಹೊನ್ನಕ್ಕಳವರ ಎಂಬ ಬಾಲಕ ಮೃತಪಟ್ಟಿದ್ದು, ಡೆಂಘಿ ಜ್ವರಕ್ಕೆ ಜಿಲ್ಲೆಯಲ್ಲಿ ಎರಡನೇ ಸಾವು ಇದಾಗಿದೆ.
ಧನು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದು ಮೊದಲು ರಾಣೇಬೆನ್ನೂರು ಸರ್ಕಾರಿ ಚಿಕಿತ್ಸೆ ಪಡೆದಿದ್ದರು, ಗುಣಮುಖವಾಗದ ಹಿನ್ನಲೆ ಬೇರೆ ದಾವಣಗೆರೆಯ ಆಸ್ಪತ್ರೆಗೆ ಪೋಷಕರು ಕರೆದೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಸೂಕ್ತ ಚಿಕಿತ್ಸೆ ಹಾಗೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಎಂದು ಇಲಾಖೆಗೆ ಜನರ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….