ಕಲಬುರಗಿ, (ಜುಲೈ.08): ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು
ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಸ್ವಾಮಿಗಳು ಮೃತಪಟ್ಟಿದ್ದಾರೆ.
ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ನಡೆಯಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….