ದೊಡ್ಡಬಳ್ಳಾಪುರ, (ಜುಲೈ.08): ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.66 ಲಕ್ಷ ಹಣ ಸಂಗ್ರಹವಾಗಿದೆ.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 66,83,320 ರೂ. ಮೊತ್ತ ಸಂಗ್ರಹವಾಗಿದೆ.
ಇದರೊಂದಿಗೆ 1ಲಕ್ಷ 20 ಸಾವಿರ ಮೌಲ್ಯದ 2 ಕೆಜಿ 280 ಗ್ರಾಂ ಬೆಳ್ಳಿ, 15500 ರೂ ಮೌಲ್ಯದ 02 ಗ್ರಾಂ 700 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಈ ವೇಳೆ ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ.ಜೆ.ಹೇಮಾವತಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ಸಿಬ್ಬಂದಿ ನಂಜಪ್ಪ ಸೇರಿದಂತೆ ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ, ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….