ಹಿರಿಯೂರು, (ಜುಲೈ.08): 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಸಂಭವಿಸಿದೆ.
ಮೃತನನ್ನು 13 ವರ್ಷದ ಪ್ರೇಮ ಸಾಗರ ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನಾದ ಈತ, ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಿರಿಯ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಶರಣಾಗಿದ್ದಾನೆ ಶಂಕೆ ವ್ಯಕ್ತವಾಗಿದೆ. ತನ್ನ ವಾಸ್ತವ್ಯ ಕೊಠಡಿಗೆ ಬಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಪ್ರೇಮ ಸಾಗರ ಮೃತದೇಹವನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….