ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ.10): ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2024-25 ನೇ ಸಾಲಿಗೆ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ (20+01) ಕುರಿ/ ಮೇಕೆ ಘಟಕಗಳ ಅನುಷ್ಟಾನಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಈ ಹಿಂದೆ ಯೋಜನೆಯಡಿ ಯಾವುದೇ ಸಹಾಯ ಧನ ಸೌಲಭ್ಯ ಪಡೆಯದೆ ಇರುವ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೂಕ್ತ ಕುರಿಗಾರರು ಸದಸ್ಯತ್ವ ಹೊಂದಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ನಿಗದಿತ ನಮೂನೆಯ ಅರ್ಜಿ ಪಡೆದು ಜುಲೈ 18 ರ ಒಳಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ‘ಕುರಿ ಭವನ’ ಪಶುವೈದ್ಯಕೀಯ ಕಾಲೇಜು ಆವರಣ ಹೆಬ್ಬಾಳ, ಬೆಂಗಳೂರು ಕಛೇರಿಗೆ ಸಲ್ಲಿಸುವುದು.
ಎಲ್ಲ ದಾಖಲಾತಿಗಳು ಸರಿಯಿದ್ದು, ನಿಗದಿತ ಸಮಯದೊಳಗೆ ಬರುವ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿಯ ಸಭೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಮ್ಮ ಹೋಬಳಿ ವ್ಯಾಪ್ತಿಯ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯನ್ನು ಸಂಪರ್ಕಿಸಬಹುದು.
ತೂಬಗೆರೆ ಹೋಬಳಿ ದೊಡ್ಡಬಳ್ಳಾಪುರ ತಾಲೂಕು- 8105657149/ 9538550766, ನಂದಗುಡಿ ಹೋಬಳಿಯ ಹೊಸಕೋಟೆ ತಾಲೂಕು- 9900734275, ಕಸಬಾ ಹೋಬಳಿಯ ಹೊಸಕೋಟೆ ತಾಲೂಕು- 9845034539/ 99450964260 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….