ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ: ಪದ್ಮಾವತಿ ಜಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ.10):  ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆ, ಗೃಹಲಕ್ಷ್ಮಿ ಮೈತ್ರಿ, ಮನಸ್ವಿನಿ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಪಡೆದು ಯೋಜನೆಯ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪದ್ಮಾವತಿ.ಜಿ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಮಹಿಳಾ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಇತರೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಅಧಿಕಾರಿಗಳು ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಕೆಲಸ ಮಾಡಬೇಕು. ದಮನಿತರ, ಧ್ವನಿ ಇಲ್ಲದವರ, ಬಡವರ, ಮಹಿಳೆಯರು  ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳು ತಲುಪುವಂತಾಗಬೇಕು.

ಈ ನಿಟ್ಟಿನಲ್ಲಿ ಮಹಿಳಾ ಅಭಿವೃದ್ಧಿ ನಿಗಮ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲು ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸ್ತ್ರೀ ಶಕ್ತಿ ಸಂಘಗಳು, ಇತರೆ ಸ್ವಸಹಾಯ ಸಂಘಗಳ ಮೂಲಕ ಸಾಲ ಸೌಲಭ್ಯ ಒದಗಿಸಿ ಅರ್ಥಿಕವಾಗಿ ಸಬಲೆಯರನ್ನಾಗಿ ಮಾಡುವುದು ನಿಗಮದ ಗುರಿಯಾಗಿದೆ ಎಂದು ಹೇಳಿದರು.

ಲಿಂಗತ್ವ  ಅಲ್ಪ ಸಂಖ್ಯಾತರಿಗೆ ಕೂಡ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಆಹಾರ ಪಡಿತರ ಚೀಟಿ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧ್ಯಕ್ಷರಾದ ಪದ್ಮಾವತಿ ಜಿ ಅವರು ನೀಡಿದರು.

ಮಹಿಳೆಯರಿಗಾಗಿ ಸರ್ಕಾರ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳಲ್ಲಿ ಪಡೆದುಕೊಳ್ಳಬಹುದಾಗಿದ್ದು, ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯ, ಸಹಾಯಧನ ಸೇರಿದಂತೆ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳು ಇದ್ದು, ಮಹಿಳೆಯರು ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ ಎಂದರು.

ನಂತರ ಮಹಿಳಾ ಉದ್ದಿಮೆದಾರರೊಂದಿಗೆ ಸಂವಾದ ನಡೆಸಿ ಕುಂದು ಕೊರತೆ ಆಲಿಸಿ, ಉದ್ದಿಮೆಗಳ ಬಗೆಗಿನ ಅಭಿಪ್ರಾಯ ಪಡೆದುಕೊಂಡರು ಹಾಗೂ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಅಕ್ಕಮಹಾದೇವಿ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮುದ್ದಣ್ಣ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹೇಶ್.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನಿತಾ ಲಕ್ಷ್ಮಿ, ನಿಗಮದ ಅಭಿವೃದ್ಧಿ ನಿರೀಕ್ಷಕರಾದ ವಿಜಯ ಕುಮಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ ಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಸಿ.ಡಿ.ಪಿ.ಒ ಗಳು, ಜಿಲ್ಲಾ ಮಹಿಳಾ ಅಭಿವೃದ್ಧಿ ಘಟಕ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!