ಜಪಾನ್ ಮತ್ತು ದಕ್ಷಿಣ ಕೊರಿಯಾದ ಕಂಪನಿಗಳಿಂದ 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ; ಎಂ.ಬಿ.ಪಾಟೀಲ

ಬೆಂಗಳೂರು, (ಜುಲೈ.10); ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ  ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ರೂ.6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ  1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಸಚಿವ ಪಾಟೀಲ ಅವರು,  ‘ಜೂನ್ 24ರಿಂದ ಜುಲೈ 5ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿಯ ಸಮಯದಲ್ಲಿ, ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ರೋಡ್‌ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತುʼ ಎಂದು ಹೇಳಿದರು.

ʼ35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ – ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಭಾಗವಹಿಸಲು  ಟೋಕಿಯೊ ಮತ್ತು ಸೋಲ್‌ನಲ್ಲಿ ನಡೆದ ರೋಡ್‌ ಷೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ  ಆಹ್ವಾನ ನೀಡಲಾಯಿತುʼ ಎಂದರು.

ʼಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ.

ʼದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್‌ ಗವರ್ನರ್ ಮತ್ತು ಸೋಲ್‌ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್  ಸೇರಿದಂತೆ  ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು.

ʼದಕ್ಷಿಣ ಕೊರಿಯಾದಲ್ಲಿ ನಡೆದ  ಸಭೆಗಳಲ್ಲಿ ಸ್ಯಾಮ್ಸಂಗ್‌ ಎಲೆಕ್ಟ್ರಾನಿಕ್ಸ್‌, ಎಲ್‌ಜಿ ಎನರ್ಜಿ ಸೊಲ್ಯೂಷನ್ಸ್, ಎಲ್‌ಎಕ್ಸ್‌ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್‌, ಎಚ್‌ವೈಎಸಿ, ಹುಂಡೈ ಮೋಟರ್ಸ್‌, ವೈಜಿ-1, ಹೊಯ್ಸಂಗ್‌ ಅಡ್ವಾನ್ಸಡ್‌ ಮಟೇರಿಯಲ್ಸ್‌ ಮುಂತಾದವು ಸೇರಿವೆʼ ಎಂದು ಸಚಿವ ಪಾಟೀಲ ವಿವರಿಸಿದರು.

ಹೂಡಿಕೆ ಬದ್ಧತೆಗಳು & ಒಪ್ಪಂದಗಳ ವಿವರ:

ಒಸಾಕಾ ಗ್ಯಾಸ್: ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು ರೂ.5000 ಕೋಟಿ (600 ದಶಲಕ್ಷ ಡಾಲರ್‌) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ತೋರಿದೆ.

ಡಿಎನ್‌ ಸೊಲ್ಯೂಷನ್ಸ್: ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್‌ ಸೊಲ್ಯೂಷನ್ಸ್‌,  ಕೈಗಾರಿಕಾ ಯಂತ್ರೋಪಕರಣಗಳು ಮತ್ತು  ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ರೂ.1000 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಅವೊಯಮಾ ಸೈಸಕುಶೊ: ವಾಹನ ಬಿಡಿಭಾಗಗಳನ್ನು  ಪೂರೈಸುವ  ಜಪಾನಿನ ಅವೊಯಮಾ ಸೈಸಕುಶೊ, ತುಮಕೂರು ಬಳಿಯ ಜಪಾನ್‌ ಕೈಗಾರಿಕಾ  ಟೌನ್‌ಶಿಪ್‌ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ರೂ.210 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಡೈಕಿ ಆ್ಯಕ್ಸಿಸ್‌, ಹೈವಿಷನ್‌ ಮತ್ತು  ಇಎಂಎನ್‌ಐ ಕಂಪನಿ ಲಿಮಿಟೆಡ್‌: ಬ್ಯಾಟರಿ ಸೆಲ್‌ಗಳ ಸಂಗ್ರಹ  ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು   ಜಂಟಿಯಾಗಿ ರೂ.210 ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್‌ಎಚ್‌ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.

ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ  ರೂ.25,000 ಕೋಟಿ  ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆಯು, ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಸೂಚಿಸುತ್ತದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ  ಡಾ.ಎನ್.ಮಂಜುಳಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ, ಮೂಲಸೌಕರ್ಯ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಈ ಸಂದರ್ಭದಲ್ಲಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!