ನವದೆಹಲಿ, (ಜುಲೈ.12): ರಕ್ಷಣಾ ಸಚವ, ಬಿಜೆಪಿ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿ ಎಎನ್‌ಐ ವರದಿ ಮಾಡಿದೆ.
ವರದಿ ಪ್ರಕಾರ, ರಾಜನಾಥ್ ಸಿಂಗ್ ಅವರಿಗೆ ತೀವ್ರ ಬೆನ್ನು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಮ್ಸ್ ನ್ಯೂರೋ ಸರ್ಜರಿ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….