ಬೆಂಗಳೂರು, (ಜುಲೈ.12): ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ಅಂತ್ಯಕ್ರಿಯೆ ಪೊಲೀಸ್ ಗೌರವಗಳೊಂದಿಗೆ ನೆರವೇರಿದೆ.
ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ.
ನಟಿ ಹಾಗೂ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ.
ಚಿತ್ರರಂಗಕ್ಕೆ ಕಳೆದ 3 ದಶಕಗಳಿಂದ ಸೇವೆ ಸಲ್ಲಿಸಿರುವ ನಟಿಗೆ ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು.
ಇದಕ್ಕೂ ಮುನ್ನ ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು.
ಸೃಜನ್ ಲೋಕೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….