ಮೈಸೂರು, (ಜುಲೈ.12): ಬಹು ಕೋಟಿ ಮುಡಾ ಹಗರಣ ಖಂಡಿಸಿ ಬಿಜೆಪಿ ನಾಯಕರು ಇಂದು ಪ್ರತಿಭಟನೆಗೆ ಮುಂದಾಗಿದ್ದು, ಮೈಸೂರಿಗೆ ಹೊರಟಿದ್ದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಅವ್ಯವಹಾರ ಖಂಡಿಸಿ ಹಾಗೂ ಮುಡಾ ಹಗರಣ ಸಿಬಿಐಗೆ ವಹಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿತ್ತು.
ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಶೋಕ್ ನೇತೃತ್ವದಲ್ಲಿ ಮೈಸೂರಿನ ಮಹಾರಾಜ ಕಾಲೇಜು ಬಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಮೈಸೂರು ಹೊರಟಿದ್ದ ಬಿಜೆಪಿ ನಾಯಕರನ್ನು ಕೆಂಗೇರಿಯ ಕದಂಬ ಹೋಟೆಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡಾ ಪ್ರತಿಭಟನೆಗೆ ಮುಂದಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಆರೋಪಿಸಿ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.
ಮೈಸೂರು ಉಸ್ತುವಾರಿ ಸಚಿವ ಮಹದೇವಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….