ಯಾವುದು ಅಸಾಧ್ಯವಾಗಿತ್ತೋ ಅದನ್ನು ನಾನು ಮಾಡಿ ತೋರಿಸಿದ್ದೇನೆ: ಬಸವರಾಜ ಬೊಮ್ಮಾಯಿ

ಹಾವೇರಿ, (ಜುಲೈ.12): ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಗೆ ಧನ್ಯವಾದ ಯಾತ್ರೆ ಆರಂಭಿಸಿದ್ದು, ಇದು ಯಾವುದೇ ರಾಜಕೀಯ ಯಾತ್ರೆಯಲ್ಲ ಮುಂದಿನ ಚುನಾವಣೆಗೂ ಈ ಯಾತೆಗೂ ಸಂಬಂಧವಿಲ್ಲ. ನಮ್ಮ ನಿಮ್ಮ ನಡುವಿನ ಅವಿನಾಭಾವ ಸಂಬಂಧವನ್ನು ಶಾಶ್ವತಗೊಳಿಸಲು ಈ ಯಾತ್ರೆ ಮಾಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಶಿಗ್ಗಾವಿ ಹಾಗೂ ಸವಣೂರು ವಿಧಾನಸಭಾ ಕ್ಷೇತ್ರದ ಮುತ್ತಳ್ಳಿ, ತಡಸ, ಅಡವಿ ಸೋಮಾಪುರ, ಕುನ್ನೂರು, ಶ್ಯಾಡಂಬಿ, ಮಡಿ ಗ್ರಾಮಗಳಲ್ಲಿ ಇಂದು ಆರಂಭಿಸಿರುವ ಮತದಾರರಿಗೆ ಧನ್ಯವಾದ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾನು ಶಾಸಕನಾಗಿಯೇ ನಿಮ್ಮ ಸೇವೆ ಮಾಡಬೇಕೆಂದೇನಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಹಾವೇರಿ ಗದಗ ಕ್ಷೇತ್ರದ ಸಂಸದನಾಗಿದ್ದು, ಈ ಕ್ಷೇತ್ರದ ಅಭಿವೃದ್ಧಿ ಹಾಗೂ ನಿಮ್ಮ ವಯಕ್ತಿಕ ಕೆಲಸಗಳನ್ನು ಮಾಡಲು ನಾನು ಸದಾ ಸಿದ್ದನಿದ್ದೇನೆ. ನಾನು ಶಾಸಕನಲ್ಲದಿದ್ದರೂ ನಿಮ್ಮ ಸೇವೆ ಮಾಡಲು ಅದಕ್ಕಿಂತ ಹೆಚ್ಚಿನ ಶಕ್ತಿಯನ್ನು ನೀವು ನನಗೆ ನೀಡಿದ್ದೀರಿ ಎಂದು ಹೇಳಿದರು.

ಇವತ್ತು ಬಹಳ ದೊಡ್ಡ ಪ್ರಮಾಣದ ಅಭಿವೃದ್ಧಿಯಾಗಬೇಕೆಂಬ ಪರಿಕಲನೆ ನನ್ನದಾಗಿತ್ತು. ವಾಣಿಜ್ಯಿಕವಾಗಿ, ಶೈಕ್ಷಣಿಕವಾಗಿ ತಡಸ ಗ್ರಾಮ ಅಭಿವೃದ್ಧಿಯಾಗಬೇಕೆಂಬ ಬಯಕೆ ನನ್ನದಾಗಿದೆ. ಪ್ರಗತಿ ನಿರಂತರ ನಡೆಯುವ ಪ್ರಕ್ರಿಯೆ ತಡಸ್ ಗ್ರಾಮದಲ್ಲಿ ಎಲ್ಲ ಸಮುದಾಯದ ಜನರಿದ್ದಾರೆ. ಆವರೆಲ್ಲರೂ ನಮ್ಮವರು ಎಂದು ನನಗೆ ಬೆಂಬಲ ಕೊಟ್ಟಿದ್ದಾರೆ.

ಪ್ರತಿಬಾರಿ ಚುನಾವಣೆಯಲ್ಲಿ ಮತ ಎಣಿಕೆ ನಡೆಯುವುದು ತಡಸ್ ಹಾಗೂ ಮುತ್ತಳ್ಳಿ ಗ್ರಾಮದಿಂದ ಆರಂಭವಾಗುತ್ತದೆ. ಈ ಭಾಗದ ಜನರು ಕೇವಲ ಮತಗಳ ಮೂಲಕವಲ್ಲ ಅತ್ಮಸ್ಥೆರ್ಯವನ್ನೂ ನನಗೆ ನೀಡಿದ್ದಾರೆ. ನಾನು ನಿಮ್ಮನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಈ ಭಾಗದ ಜನರಿಗೆ ನನ್ನ ಮನಪೂರ್ವಕ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ಎಂದು ಹೇಳಿದರು.

ನಿಮ್ಮೆಲ್ಲರ ಆಶೀರ್ವಾದದಿಂದ ಶಾಸಕನಾಗಿ, ಸಚಿವನಾಗಿ ಮುಖ್ಯಮಂತ್ರಿಯಾಗಿ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಿ. ನಿಮಗೆ ನನ್ನ ಹೃದಯದ ಅಂತರಾಳದಿಂದ ಕೋಟಿ ಕೋಟಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು. 

ತಡಸ್ ಗ್ರಾಮ ಮೂರು ತಾಲೂಕುಗಳ ಕೇಂದ್ರ ಬಿಂದುವಾಗಿದೆ. ಈ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ, ಎಲೆಕ್ಟ್ರಿಕ್ ಸಮಸ್ಯೆಯಿಂದ ಗ್ರಾಮ ಕೂಡಿತ್ತು. ದೊಡ್ಡ ಮಳೆಯಾದರೆ ಮನೆಯೊಳಗೆ ನೀರು ಬರುತ್ತಿತ್ತು. ಈ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಿ ಊರಿಗೆ ಬಸ್ ನಿಲ್ದಾಣ, ಹೈಸ್ಕೂಲು, ಕಾಲೇಜು ಎಲ್ಲವನ್ನೂ ನಿಮ್ಮ ಸಹಕಾರದಿಂದ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು. 

ನಾನು ನಿಮ್ಮ ಹೃದಯದಲ್ಲಿ ಶಾಸ್ವತ ಸ್ಥಾನ ಮಾಡಿದ್ದೇನೆ. ನೀವು ನನ್ನ ಹೃದಯದಲ್ಲಿ ಶಾಸ್ವತ ಸ್ಥಾನ ಮಾಡಿದ್ದೀರಿ. ಬರುವ ದಿನಗಳಲ್ಲಿ ಈ ಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗಬೇಕು. ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯಿಂದ ಮುಂದುವರೆಯುತ್ತಿರುವ ತಾಲೂಕು ಎಂಬ ಹಣೆ ಪಟ್ಟಿಗೆ ಬದಲಾಯಿಸಲಾಗಿದೆ.

ವರದಾ ನದಿಯಿಂದ ತಡಸದ ಕೆರೆಗೆ ನೀರು ಹರಿಸುವ ಕುರಿತು ನಮ್ಮ ಹಿರಿಯರು ಯಾರೂ ಯೋಚನೆ ಮಾಡಿರಲಿಲ್ಲ. ಯಾವುದು ಅಸಾಧ್ಯವಾಗಿತ್ತೋ ಅದನ್ನು ನಾನು ಮಾಡಿ ತೋರಿಸಿದ್ದೇನೆ.

ವರದಾ ನದಿಯ ನೀರನ್ನು ತಡಸ ಕೆರೆಗೆ ಹರಿಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಅಭಿವೃದ್ಧಿಯ ಬಗ್ಗೆ ನಿಮ್ಮ ಕಳಕಳಿ ಇಟುಕೊಂಡು ಯಾವಾಗಲೂ ಕೂಡ ನೀವು ನನ್ನ ಬಳಿ ಬರಬಹುದು. ನನ್ನ ಮನೆಯ ಬಾಗಿಲು ಹಾರ್ಗೂ ಮನಸಿನ ಬಾಗಿಲು ತೆರೆದಿದೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!