ಮದ್ದೂರು, (ಜುಲೈ.12): ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಪುತ್ರ ಸ್ಥಳದಲ್ಲೇ ಸಾವನಪ್ಪಿರುವ ದಾರುಣ ಘಟನೆ ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮೃತರು ಬೆಂಗಳೂರಿನ ಬಾಗಲಗುಂಟೆಯ ನಿವಾಸಿ 21 ವರ್ಷದ ದರ್ಶನ್, ತಾಯಿ 40 ವರ್ಷದ ಕಲಾ ಎಂದು ಗುರತಿಸಲಾಗಿದೆ.
ಕಾರಿನಲ್ಲಿದ್ದ ಪುತ್ರಿ ಮೇಘ ಹಾಗೂ ಅಳಿಯ ಮಂಜುನಾಥ್ ಎಂಬುವವರಿಗೆ ಗಂಭೀರಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕಾರನ್ನು ಮಂಜುನಾಥ್ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬೆಂಗಳೂರಿಗೆ ವಾಪಾಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….