ಚಿತ್ರದುರ್ಗ, (ಜುಲೈ.16): ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ಚ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು 50 ವರ್ಷದ ಶಿವಾನಂದ ಎಂದು ಗುರುತಿಸಲಾಗಿದೆ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದು, ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತದೇಹ ಛಿದ್ರಗೊಂಡಿದೆ.
ಅಪಘಾತದ ತೀವ್ರತೆಗೆ ಬೈಕ್ ಕೂಡ ಜಖಂಗೊಂಡಿದೆ. ಇನ್ನು ಮೃತ ದೇಹದ ಕೆಲವು ಭಾಗಗಳು ರಸ್ತೆ ತುಂಬಾ ಬಿದ್ದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….