ಅಂಕೋಲಾ, (ಜುಲೈ.16): ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಘಟನೆ ಕುರಿತು ಸದನದಲ್ಲಿ ಮಾಹಿತಿ ನೀಡಿದ ಅವರು, ಮಳೆಯಿಂದಾಗಿ ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್, ಎನ್ಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಘಟನೆಯಲ್ಲಿ ಅಲ್ಲಿದ್ದ ಡಾಬದ ನಾಲ್ಕುಮಂದಿ, ಎರಡು ಗ್ಯಾಸ್ ಟ್ಯಾಂಕರ್ನ ಮೂವರು ಸೇರಿ 7 ಜನ ಸಾವನಪ್ಪಿರುವ ಸಾಧ್ಯತೆ ಇದೆ. ಓರ್ವ ಮಹಿಳೆ ಶವ ಪತ್ತೆಯಾಗಿದೆ.
ಡಾಬಾ ಮೇಲೆ ಕುಸಿದ ಗುಡ್ಡರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನಲ್ಲಿನ ಗುಡ್ಡದ ಬಳಿ ಟ್ಯಾಂಕರ್ ನಿಲ್ಲಿಸಿ, ಚಾಲಕ ಹಾಗೂ ಕ್ಲೀನರ್ ಅಲ್ಲಿಯೇ ಚಹಾ ಕುಡಿಯುತ್ತಿದ್ದರು. ಈ ವೇಳೆ ಧಿಡೀರನೆ ಬೃಹತ್ ಗುಡ್ಡ ಕುಸಿದಿದೆ.
ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಏಳು ಜನ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….