ಹೊಸಕೋಟೆ, (ಜುಲೈ.16); ಬಂಧಿಸಲು ತೆರಳಿದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ಹೊಸಕೋಟೆಯ ರಾಷ್ಟೀಯ ಹೆದ್ದಾರಿ ಲ್ಯಾಂಕೋ ಟೋಲ್ ಬಳಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಗಾಂಜಾ ,ಮಾದಕ ದ್ರವ್ಯ ವಸ್ತುಗಳ ಪೂರೈಕೆ ಮಾಡುವ ಆರೋಪಿ ಸೈಯದ್ ಸೋಹಲ್ (25 ವರ್ಷ), ಗಾಂಜಾ ಸಾಗಾಣೆ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ನೇತೃತ್ವದಲ್ಲಿ ಸಿಬ್ಬಂದಿಗಳು ಬಂದಿಸುವಾಗ ಪೋಲಿಸರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ.
ಈ ಸಮಯದಲ್ಲಿ ಇನ್ಸ್ಪೆಕ್ಟರ್ ಅಶೋಕ್ ಅವರು ಪಿಸ್ತೂಲ್ ನಿಂದ ಕಾಲಿಗೆ ಗಂಡುಹಾರಿಸಿ, ಬಂಧಿಸಿದ್ದಾರೆ. ಈ ವೇಳೆ ಗಾಯಗೊಂಡ ಆರೋಪಿಯನ್ನು ನಗರದ ಸರ್ಕಾರಿ ಅಸ್ವತ್ರೆಗೆ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕತ್ಸೆಗೆ ಎಂವಿಜೆ ಅಸ್ವತ್ರೆಗೆ ದಾಖಲಿಸಿರುತ್ತಾರೆ.
ಅರೋಪಿಯಾದ ಸೈಯದ್ ಸುಹೇಲ್ ನು ಹೊಸಕೋಟೆ, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳ ಅಡಿಯಲ್ಲಿ ದೂರು ದಾಖಲಾಗಿರುತ್ತದೆ.
ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….