ದೋಡಾ, (ಜುಲೈ.15): ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯ ವೇಳೆ ಜಮ್ಮು ಕಾಶ್ಮೀರ ದೋಡಾ ಜಿಲ್ಲೆಯ ದೇಸಾ ಪ್ರದೇಶದಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಗುಂಡಿನ ದಾಳಿಯಲ್ಲಿ ಅಧಿಕಾರಿಯೊಬ್ಬರು ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ರಾತ್ರಿ ದೋಡಾ ಜಿಲ್ಲೆಯ ದೇಸಾ ಪ್ರದೇಶದಲ್ಲಿ ನಡೆದ ಈ ಗುಂಡಿನದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯಿತು.
ಕಳೆದ ವಾರ ಕಥುವಾದಲ್ಲಿ ಐವರು ಯೋಧರು ಹುತಾತ್ಮರಾದ ನಂತರ ಜಮ್ಮು ಪ್ರದೇಶದಲ್ಲಿ ನಡೆದ ಎರಡನೇ ಪ್ರಮುಖ ಗುಂಡಿನದ ಇದಾಗಿದೆ. ಆ ದಾಳಿಯಲ್ಲಿ ಐವರು ಸೈನಿಕರು ಗಾಯಗೊಂಡಿದ್ದರು, ಭಯೋತ್ಪಾದಕರು 500 ಮೀಟರ್ ಅಂತರದಲ್ಲಿದ್ದ ಟ್ರಕ್‌ಗಳ ಮೇಲೆ ಗ್ರೆನೇಡ್‌ಗಳೊಂದಿಗೆ ದಾಳಿ ನಡೆಸಿದ್ದರು.
ಕೆಲವೆ ದಿನಗಳ ಅಂತರದಲ್ಲಿ ಮತ್ತೆ ಭಯೋತ್ಪಾದಕರ ದಾಳಿ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಗೃಹ ಸಚಿವರು ಇಲ್ಲವೇ ಎಂಬ ಪ್ರಶ್ನೆ ಕೇಳಿ ಬರುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….