ನವದೆಹಲಿ, (ಜುಲೈ.16); ಇಂದು ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಎನ್‌ಕೌಂಟರ್‌ನಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮರಿಗೆ ನನ್ನ ವಿನಮ್ರ ಶ್ರದ್ಧಾಂಜಲಿ ಸಲ್ಲಿಸುತ್ತಾ, ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಒಂದರ ಹಿಂದೆ ಒಂದರಂತೆ ಇಂತಹ ಭಯಾನಕ ಘಟನೆಗಳು ಅತ್ಯಂತ ದುಃಖಕರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಈ ನಿರಂತರ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದ ಹದಗೆಟ್ಟ ಸ್ಥಿತಿಯನ್ನು ಬಹಿರಂಗಪಡಿಸುತ್ತಿವೆ. ಬಿಜೆಪಿಯ ತಪ್ಪು ನೀತಿಗಳ ಪರಿಣಾಮ ನಮ್ಮ ಸೈನಿಕರು ಮತ್ತು ಅವರ ಕುಟುಂಬಗಳು ಅನುಭವಿಸುತ್ತಿವೆ.
ಪದೇ ಪದೇ ಸಂಭವಿಸುತ್ತಿರುವ ಭದ್ರತಾ ಲೋಪಗಳಿಗೆ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಮತ್ತು ದೇಶದ ಮತ್ತು ಸೈನಿಕ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಯೊಬ್ಬ ದೇಶಭಕ್ತ ಭಾರತೀಯನ ಆಗ್ರಹವಾಗಿದೆ.
ಈ ದುಃಖದ ಸಮಯದಲ್ಲಿ, ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ನಿಂತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….