ದೊಡ್ಡಬಳ್ಳಾಪುರ, (ಜುಲೈ.17); ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳುವಾಗ ಕಾಲು ಜಾರಿಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ಹೊಸಹಳ್ಳಿ ಗ್ರಾಮದ 27 ವರ್ಷದ ನವೀನ್‌ಕುಮಾರ್ ರೆಡ್ಡಿ ಎಂದು ಗುರುತಿಸಲಾಗಿದೆ.
ಮೃತನು ಇಂದು ಬೆಳಗ್ಗೆ ಜಮೀನಿಗೆ ಹೂ ಬಿಡಿಸಲು ತೆರಳಿದ್ದು, ಈ ವೇಳೆ ಪಕ್ಕದ ಜಮೀನನಲ್ಲಿ ನಿರ್ಮಿಸಲಾಗಿದ್ದ ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….