ಹಾಸನ, (ಜುಲೈ.17); ಹರದನಹಳ್ಳಿಯ ದೇವೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ದಿಢೀರನೆ ಆಸ್ಪತ್ರೆಗೆ ಸೇರುವಂತಾಗಿದೆ. ದೇವಸ್ಥಾನದ ಬಳಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಪಕ್ಕೆಲುಬಿಗೆ ತೀವ್ರವಾಗಿ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ.
ಕಾಲು ಜಾರಿ ಬಿದ್ದು ಗಾಯಗೊಂಡ ಅವರನ್ನು ಕೂಡಲೇ ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಆಷಾಡ ಏಕಾದಶಿ ಪ್ರಯುಕ್ತ ಉಪವಾಸವಿದ್ದ ಅವರು ಸುಸ್ತಾಗಿದ್ದರು ಎನ್ನಲಾಗಿದ್ದು, ದೇಗುಲದಲ್ಲಿ ಪೂಜೆ ಸಲ್ಲಿಸಿ ಹೊರ ಬುರುವಾಗ ಅವರು ಪಾಚಿಗಟ್ಟಿದ್ದ ನೆಲದ ಮೇಲೆ ಕಾಲಿಟ್ಟಿದ್ದರಿಂದ ಜಾರಿ ಬಿದ್ದಿದ್ದಕ್ಕೆ ಪೆಟ್ಟಾಗಿದೆ.
ಪೂಜೆ ಮುಗಿಸಿ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….