CM: ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.19): ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ  ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳು ಇದ್ದಾರೆ. 

ಯೂನಿಯನ್‌ ಬ್ಯಾಂಕ್‌ ಅಫ್‌ ಇಂಡಿಯಾದ ಅಧಿಕಾರಿ ಮಹೇಶ್‌ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್‌ಐಟಿ ಈಗಾಗಲೇ  ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದ್ದ ಸುಮಾರು ರೂ. 46 ಕೋಟಿ ಸ್ಥಗಿತಗೊಳಿಸಲಾಗಿದೆ. 

ಪ್ರಕರಣದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ವಿರೊಧ ಪಕ್ಷಗಳ ಸದಸ್ಯರು ನಿಯಮ 69ರ ಅಡಿಯಲ್ಲಿ 7ತಾಸಿಗೂ ಅಧಿಕ ಕಾಲ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೆ ಅಭಿಪ್ರಾಯ ವ್ಯಕ್ತಪಡಿಸಲು ಇರುವ ಅವಕಾಶದಷ್ಟೇ, ಸರ್ಕಾರಕ್ಕೂ ತನ್ನ ನಿಲುವು ವ್ಯಕ್ತಪಡಿಸಲು ಹಕ್ಕಿದೆ ಎಂದು ಹೇಳಿದರು.

ವಾಲ್ಮಿಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣವನ್ನು ಯೂನಿಯನ್‌  ಬ್ಯಾಂಕ್‌ ಆಫ್‌ ಇಂಡಿಯಾದ ಎಂಜಿ ರಸ್ತೆ ಖಾತೆಗೆ ವರ್ಗಾಯಿಸಿ ಅಲ್ಲಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕ್‌ ಆಗಿದ್ದು, ಕೇಂದ್ರ ಹಣಕಾಸು ಇಲಾಖೆ ಅಧೀನಕ್ಕೆ ಬರುತ್ತದೆ. ಬ್ಯಾಂಕ್‌ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಕುರಿತು ಆತ್ಮಹತ್ಯೆ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪರಿಶಿಷ್ಟ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.

ಬಿಜೆಪಿ ಆಡಳಿತ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಹಗರಣವಾದಾಗ ಅವರ ಪಕ್ಷದವರೇ ಆದ ಗೂಳಿಹಟ್ಟಿ ಶೇಖರ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಆಗ ಯಾರು ರಾಜೀನಾಮೆ ನೀಡಿದ್ದರು? ಎಪಿಎಂಸಿ ಯಲ್ಲಿ ಆವರ್ತನಿಧಿ ʻಲೂಟಿ ಮಾಡಿದಾಗ, ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ ಹಗರಣದಲ್ಲಿ 47.10 ಕೋಟಿ ರೂ. ಅವ್ಯವಹಾರವಾದಾಗ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೇ? ಈ ಪ್ರಕರಣಗಳಲ್ಲಿ ಇ.ಡಿ. ಯಾಕೆ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿಲ್ಲ ಎಂದು ಪ್ರಶ್ನಿಸಿದರು.

ಎಲ್ಲಾ ಅಭಿವೃದ್ಧಿ ನಿಗಮಗಳ ಹಣವನ್ನು ಕಡ್ಡಾಯವಾಗಿ ರಾಜ್ಯ ಖಜಾನೆಯಲ್ಲಿ ಜಮಾ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಹಲವು ಮಾರ್ಗಸೂಚಿಗಳನ್ನು ಹಣಕಾಸು ಇಲಾಖೆ ಜಾರಿಗೊಳಿಸಿದೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!