ದೊಡ್ಡಬಳ್ಳಾಪುರ, (ಜುಲೈ.19); ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ಮೆನೆಗಳ ಮೇಲೆ ದಾಳಿ ನಡೆಸಿದ್ದು, ತಪಾಸಣೆ ನಡೆಸುತ್ತಿದ್ದಾರೆ.
ಏಕಕಾಲದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಹಾಗೂ ತುಮಕೂರಿನಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ದಾಳಿ ನಡೆಸಲಾಗಿದೆ.
ಇದರನ್ವಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಆರ್ ಸಿದ್ದಪ್ಪ ಅವರ ಮನೆಯ ಮೇಲೆ ಲೋಕಾಯುಕ್ತ ಎಸ್ಪಿ ಪ್ರವೀಣ್ ನೆಜ್ಜೂರು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮೂಲಗಳ ಮಾಹಿತಿ ಅನ್ವಯ ರಾಮೇಶ್ವರ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಆರ್ ಸಿದ್ದಪ್ಪ ಅವರ ಮದುರೆ ಹೋಬಳಿಯ ನಾಗೇನಹಳ್ಳಿ ಮನೆ ಹಾಗೂ ಅದೇ ಗ್ರಾಮದಲ್ಲಿನ ಅವರ ಅತ್ತೆಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ರಾಮೇಶ್ವರ ಆಸ್ಪತ್ರೆಯಲ್ಲಿಯೂ ತಪಾಸಣೆ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….