Ohmimu; ದೊಡ್ಡಬಳ್ಳಾಪುರದಲ್ಲಿ ಓಮಿಯಮ್ ಕಂಪನಿ ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನೆ..!

ಬೆಂಗಳೂರು, (ಜುಲೈ.19): ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ಬಿ ಪಾಟೀಲ ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ ಜೋಷಿ ಅವರು ಘಟಕಕ್ಕೆ ಚಾಲನೆ ನೀಡಿದರು.

ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು.  ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ ಎಂದರು.

ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು.

ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ ಎಂದು ಅವರು ನುಡಿದರು.

ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಶಾಸಕ ಧೀರಜ್, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!