ಬೆಂಗಳೂರು, (ಜುಲೈ.19): ಪೊಲೀಸ್ ಠಾಣೆಯಲ್ಲಿ ದಾಖಲಾದ ಗ್ಯಾಸ್ ಸಿಲಿಂಡರ್ ಜೊತೆಗೆ ನಾಲ್ಕು ಜೊತೆ ಶೂ ಕಳವು ಪ್ರಕರಣದ ಕುರಿತು ತನಿಖೆ ನಡೆಸಿದ ವಿದ್ಯಾರಣ್ಯಪುರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಸಾವಿರಾರು ಮೌಲ್ಯದ ಚಪ್ಪಲಿ, ಶೂಗಳನ್ನು ವಶಪಡಿಸಿಕೊಂಡಿದ್ದಾರೆ.
ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗ್ಯಾಸ್ ಸಿಲಿಂಡರ್ ಜೊತೆಗೆ ನಾಲ್ಕು ಜೊತೆ ಶೂ ಕಳವು ಪ್ರಕರಣದ ಹಿನ್ನಲೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಚಪ್ಪಲಿ ಹಾಗೂ ಶೂ ಕಳ್ಳತನದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮನೆಯ ಮುಂದೆ ಇರುತ್ತಿದ್ದ ಬೆಲೆ ಬಾಳುವ ಚಪ್ಪಲಿ, ಶೂಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರು, ಅವುಗಳನ್ನು ಸ್ವಚ್ಚಗೊಳಿಸಿ ಊಟಿ, ಕೊಡೆಕೆನಾಲ್, ಬೆಂಗಳೂರಿನ ಸಂಡೆ ಬಜಾರ್‌ನಲ್ಲಿ ಮಾರಾಟ ಮಾಡುತ್ತಿದ್ದರು.
ಈ ಕುರಿತು ಸಾರ್ವಜನಿಕರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳದೆ, ದೂರು ನೀಡದ ಹಿನ್ನಲೆಯಲ್ಲಿ ಇದನ್ನೆ ಬೃಹತ್ ಜಾಲವಾಗಿ ಮಾಡಿಕೊಂಡಿದ್ದ ಕಳ್ಳರು ಲಕ್ಷಾಂತರ ಮೌಲ್ಯದ ಚಪ್ಪಲಿ, ಶೂಗಳನ್ನು ಕದ್ದು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ.
ಬಂಧಿತರಿಂದ 700 ಜೊತೆ ಚಪ್ಪಲಿ, ಶೂಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….