ಬೆಂಗಳೂರು, (ಜುಲೈ.20): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡಾಟ ಇನ್ನೂ ಮುಂದುವರಿದಿದೆ. ಫಾರ್ಚುನರ್ ಕಾರು ಮುಂದೆ ಹೋಗೋಕೆ ಬಿಟ್ಟಿಲ್ಲ ಎಂದು ಪುಂಡರ ಗುಂಪೊಂದು ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಪುಂಡರ ಗುಂಪು ಫಾರ್ಚುನರ್ ಕಾರಿನಲ್ಲಿ ಹೋಗುತ್ತಿದ್ದಾಗ ಮುಂದೆ ಇದ್ದ ಇನೋವಾ ಕಾರು ಚಾಲಕನನ್ನು ಹೊರಗೆಳೆದು ಹಲ್ಲೆ ನಡೆಸಿದ್ದಾರೆ.
ಘಟನೆಯ ವಿಡಿಯೋವನ್ನು ನೆರೆದಿದ್ದ ಜನರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಟ್ವಿಟರ್ ಬಳಕೆದಾರೊಬ್ಬರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಅಸಹಾಯಕನ ಮೇಲೆ ಹೀಗೆ ಹಲ್ಲೆ ಮಾಡಲಾಗಿದೆ.
ಅಸಹಾಯಕರ ಮೇಲೆ ಈ ರೀತಿ ದರ್ಪ ತೋರುವವರಿಗೆ ಶಿಕ್ಷೆ ಆಗಬೇಕು ಎಂದು ಪೋಸ್ಟ್‌ನಲ್ಲಿ ಬರೆದಿದ್ದು, ಸದ್ಯ ಘಟನೆ ಸಂಬಂಧ ಪೊಲೀಸರು ಮಾಹಿತಿ ಪಡೆದಿದ್ದಾರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….