ಬೆಂಗಳೂರು, (ಜುಲೈ .20): ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ವಿಧಾನಪರಿಷತ್ ನಲ್ಲಿ ನಡೆದ ಪ್ರಶೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್.ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಂತಿ ಬೇಲಿ ಅಳವಡಿಸಲು ಸರಕಾರದಿಂದ ಶೇ.40 ರಿಂದ ಶೇ. 50ರ ವರೆಗೆ ಸಬ್ಸಿಡಿ ನೀಡಲಾಗುತ್ತಿದೆ.
ಕಳೆದ ಮೂರು ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ 6,601 ಕೃಷಿ ಹೊಂಡಗಳನ್ನು ನಿರ್ಮಿಸಲು 2,332.75 ಲಕ್ಷ ರೂ.ವೆಚ್ಚ ಭರಿಸಲಾಗಿದೆ. ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಹಾಗೂ ಇತರೆ ಉಪಚಾರಗಳು ಯೋಜನೆಯಡಿ 12.9 ಕೋಟಿ ರೂ. ವೆಚ್ಚದಲ್ಲಿ 3,768 ಕೃಷಿ ಹೊಂಡಗಳು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 188.74 ಕೋಟಿ ರೂ. ವೆಚ್ಚ ದಲ್ಲಿ 23,317 ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….