ದೊಡ್ಡಬಳ್ಳಾಪುರ, (ಜುಲೈ.20); ನಾಳೆ ದಿನಾಂಕ 21ರ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ಮೋದಿ ಅವರು ದೊಡ್ಡಬಳ್ಳಾಪುರ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಈ ಕುರಿತು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಅವರು, ಯಲಹಂಕದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಂತರ ಯಲಹಂಕದ ಶಿರಡಿ ಸಾಯಿ ಮಂದಿರ ಭೇಟಿ ನೀಡಲಿದ್ದು, ಗಂಚಿ ಸಮಾಜ್ ಪೂರ್ಣೇಶ್ವರ್ ಧಾಮ್ ಟ್ರಸ್ಟ್ ಗೆ ಭೇಟಿ ನೀಡಲಿದ್ದಾರೆ.
ನಂತರ ಸಂಜೆ 04 ಗಂಟೆಗೆ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಈಗಾಗಲೇ ಪೊಲೀಸ್ ಇಲಾಖೆ ಸೂಚನೆ ನೀಡಲಾಗಿದ್ದು, ಸೂಕ್ತ ಬಂದೂಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಬಿಜೆಪಿವತಿಯಿಂದ ಅದ್ಧೂರಿ ಸ್ವಾಗತವನ್ನು ಕೋರಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….