ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರಲಿಲ್ಲ ಪ್ರಧಾನಿ ದೊಡ್ಡಣ್ಣ ಮೋದಿ..!

ದೊಡ್ಡಬಳ್ಳಾಪುರ, (ಜುಲೈ 21): ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಅಣ್ಣ ಸೋಮಭಾಯಿ ಮೋದಿ ಅವರು ಇಂದು ಪತ್ನಿ ಸಮೇತ ತಾಲೂಕಿನ ಜಿಂಕೆಬಚ್ಚೇಹಳ್ಳಿ ಗ್ರಾಮದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಗುಜರಾತ್​ನಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೋಮಭಾಯಿ ಮೋದಿ ಅವರು, ಗುರು ಪೂರ್ಣಿಮಾ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿಯಲ್ಲಿ ಗಂಚಿ ಸಮಾಜ್ ಪೂರ್ಣೇಶ್ವರ್ ದಾಮ್ ಟ್ರಸ್ಟ್ ವತಿಯಿಂದ ನಡೆದ ಸಾಯಿಬಾಬಾ ದೇವಸ್ಥಾನ ಹಾಗೂ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೆ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಬೇಕಿದ್ದ ಅವರು,  ಸಮಯ ಅಭಾವದ ಕಾರಣ ಪೂರ್ವ ನಿಯೋಜನೆಯಂತೆ ದೇವಾಲಯಕ್ಕೆ ಭೇಟಿ ನೀಡದೆ, ಹಿಂತಿರುಗಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!