ಬೆಂಗಳೂರು, (ಜುಲೈ.21): ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಆರಂಭಿಸುತ್ತಿದ್ದು, ಜುಲೈ 22ರಂದು ಸೋಮವಾರ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ.
ಗೋವಿಂದರಾಜನಗರದ ಪಟ್ಟೇಗಾರಪಾಳ್ಯ ಮುಖ್ಯ ರಸ್ತೆಯ ಕಾವೇರಿಪುರ 4ನೇ ಕ್ರಾಸ್‌ನೆ ಬಾಲಯ್ಯ ಪಾರ್ಕ್ ಎದುರು ಜುಲೈ 22ರಂದು ಮಧ್ಯಾಹ್ನ 12ಗಂಟೆಗೆ ಪೂರ್ವ ಪ್ರಾಥಮಿಕ ತರಗತಿಗೆ ಚಾಲನೆ ಕಾರ್ಯಕ್ರಮ ನಡೆಯಲಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಸರಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ತಿಳಿಸಿದ್ದರು.
ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ
• ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾದ ಸರಕಾರ.
• ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭ.
• ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರವಿತರಣೆ.
• ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ವಿತರಣೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….