ಬೆಂಗಳೂರು, (ಜುಲೈ.21): ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಹೊಯ್ಸಳ ನಗರದ ನಿವಾಸಿ 22 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ.
ಹೊಯ್ಸಳ ನಗರ 3ನೇ ಮುಖ್ಯರಸ್ತೆಯಲ್ಲಿ ಸ್ನೇಹಿತರೊಂದಿಗೆ ಯುವಕ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ವ್ಯಕ್ತಿ, ಯುವಕನನ್ನು ಗುರಾಯಿಸಿಕೊಂಡು ಹೋಗುತ್ತಿದ್ದನು ಎನ್ನಲಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯೇ ಆಗಿದೆ.
ಈ ವೇಳೆ ಯುವಕನ ಮೇಲೆ ವ್ಯಕ್ತಿ ಮಾರಣಾಂತಿಕ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಸ್ನೇಹಿತರು ದಾಖಲು ಮಾಡಿ ಚಿಕಿತ್ಸೆ ದಾಖಲಿಸಿದ್ದಾರೆ.
ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೆ ಯುವಕ ಮನೋಜ್ ಸಾವನ್ನಪ್ಪಿದ್ದಾನೆ.
ಘಟನೆ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….