ಮಲಪ್ಪುರಂ, (ಜುಲ.21): ಕರ್ನಾಟಕದ ಪಕ್ಕದ ರಾಜ್ಯ ಕೇಳರದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತ್ತೆ ಆತಂಕ ಶುರುವಾಗಿದೆ.
ಮಲಪ್ಪುರಂನ ಪಾಂಡಿಕ್ಕಾಡ್ ನಿವಾಸಿ ಬಾಲಕನ ಸ್ಥಿತಿ ಸದ್ಯ ಗಂಭೀರವಾಗಿದ್ದು ಕೋಝಿಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಲೈಫ್ ಸಪೋರ್ಟ್ನಲ್ಲಿದ್ದಾನೆ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಕೇರಳದ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಬಾಲಕನಿಗೆ ನಿಫಾ ಇರುವುದು ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಬಾಲಕ ಪೋಷಕರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನಗೆ ಒಳಪಡಿಸಲಾಗಿದೆ.
ನಿಫಾ ಆತಂಕ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಪ್ರತ್ಯೇಕ ವಾರ್ಡ್ ತೆರೆಯಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
2018ರಿಂದ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಕೇಸ್ಗಳು ದಾಖಲಾಗುತ್ತಿರುವುದು ಇದು 5 ಬಾರಿ ಎಂದು ವರದಿಯಾಗಿದೆ. ಇನ್ನು ನಿಫಾ ಸೋಂಕಿಗೆ ಕೇರಳದಲ್ಲಿ ಈಗಾಗಲೇ 17 ಜನರು ಉಸಿರು ಚೆಲ್ಲಿದ್ದಾರೆ.
ಕಳೆದ ವರ್ಷ ಇಬ್ಬರು ಸೋಂಕಿಗೆ ಬಲಿಯಾಗಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….