ದೊಡ್ಡಬಳ್ಳಾಪುರ, (ಜುಲೈ.23); ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಸರಗಳ್ಳತನ ಪ್ರಕರಣವನ್ನು ಭೇದಿಸಿರುವ ಗ್ರಾಮಾಂತರ ಠಾಣೆ ಪೊಲೀಸರು, ಚಿನ್ನದ ಸರವನ್ನು ವೃದ್ಧೆಗೆ ಮರಳಿಸಿರುವ ಘಟನೆ ಇಂದು ವರದಿಯಾಗಿದೆ.
ತಾಲೂಕಿನ ನರಸಿಂಹನಹಳ್ಳಿ ಗ್ರಾಮದ ವೆಂಕಟ ಲಕ್ಷ್ಮಮ್ಮ ಎಂಬ ವೃದ್ಧೆಯ ಕೊರಳಲ್ಲಿದ್ದ 10 ಗ್ರಾಂ ತೂಕದ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ ತನಿಖೆ ನಡೆಸಿ, ಸರಗಳ್ಳರನ್ನು ಎಡೆಮುರಿಕಟ್ಟಿ ಜೈಲಿಗೆ ಅಟ್ಟಿದಲ್ಲದೆ, ನ್ಯಾಯಾಲಯ ಅನುಮತಿ ಪಡೆದು ವೃದ್ಧೆ ವೆಂಕಟಲಕ್ಷ್ಮಮ್ಮ ಅವರಿಗೆ ಮಾಂಗಲ್ಯ ಸರವನ್ನು ಮರಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….