ನವದೆಹಲಿ, (ಜುಲೈ.23); ಇಂದು ಎನ್‌ಡಿಎ ಸರ್ಕಾರ ಮಂಡಿಸಿದ ಬಜೆಟ್ ಅನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುಸಿ ಬಚಾವೋ ಬಜೆಟ್ ಎಂದು ಲೇವಡಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಹುಮತ ದೊರಕದೆ ಮಿತ್ರಪಕ್ಷಗಳ ಅನಿವಾರ್ಯತೆಯಲ್ಲಿ ಸರ್ಕಾರ ನಡೆಸುತ್ತಿರುವ ಮೋದಿ ನೇತೃತ್ವದ ಸರ್ಕಾರ ಇಂದಿನ ಬಜೆಟ್‌ನಲ್ಲಿ ಅಗತ್ಯ ಮಿತ್ರ ಪಕ್ಷಗಳ ರಾಜ್ಯಗಳಾದ ಬಿಹಾರ ಹಾಗೂ ಆಂಧ್ರಪ್ರದೇಶದಕ್ಕೆ ಬರ್ಜರಿ ಕೊಡುಗೆ ನೀಡಿದೆ.
ಈ ಹಿನ್ನಲೆಯಲ್ಲಿ ಬಜೆಟ್ ಅನ್ನು ಮೋದಿ ಕುರ್ಸಿ ಬಚಾವೋ ಬಜೆಟ್ ಎಂದು ರಾಹುಲ್ ಗಾಂಧಿ ಕಿಚಾಯಿಸಿದ್ದು, ಮಿತ್ರರಾಷ್ಟ್ರಗಳನ್ನು ಸಮಾಧಾನಪಡಿಸಿ, ಇತರೆ ರಾಜ್ಯಗಳು ತೆರಿಗೆ ಹಣವನ್ನು ನೀಡಿಯು ನಿರೀಕ್ಷೆ ಹುಸಿಯಾಗಿದೆ.
ಮಿತ್ರರನ್ನು ಸಮಾಧಾನಪಡಿಸಿ, ಸಾಮಾನ್ಯ ಭಾರತೀಯರಿಗೆ ಯಾವುದೇ ಪರಿಹಾರವಿಲ್ಲವಾಗಿದೆ.
ಉಳಿದಂತೆ ಸಂಪೂರ್ಣವಾಗಿ ಕಾಂಗ್ರೆಸ್ ಸರಕಾರದ ಪ್ರಣಾಳಿಕೆ ಮತ್ತು ಹಿಂದಿನ ಬಜೆಟನ್ನು ಕಾಪಿ ಪೇಸ್ಟ್ ಮಾಡಿದೆ ಎಂದಿದ್ದಾರೆ.
ಚಿದಂಬರಂ: ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಮಾನ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯನ್ನೇ ಮತ್ತೊಮ್ಮೆ ಓದಿದ್ದಾರೆ ಎಂದು ನನಗೆ ಸಂತೋಷವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಲೇವಡಿ ಮಾಡಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಕಾಂಗ್ರೆಸ್ ಪ್ರಣಾಳಿಕೆಯ ಯಥಾವತ್ ಪ್ರಸ್ತುತಿ ಎಂದಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯ ಪುಟ 30ರಲ್ಲಿ ವಿವರಿಸಿರುವ ಉದ್ಯೋಗ-ಸಂಯೋಜಿತ ಪ್ರೋತ್ಸಾಹವನ್ನು ಮೋದಿ ಸರ್ಕಾರ ತನ್ನ ಬಜೆಟ್‌ನಲ್ಲಿ ವಾಸ್ತವಿಕವಾಗಿ ಅಳವಡಿಸಿಕೊಂಡಿದೆ ಎಂದು ನನಗೆ ಸಂತೋಷವಾಗಿದೆ. ಅವರು ಕಾಂಗ್ರೆಸ್ ಪ್ರಣಾಳಿಕೆಯ ಪುಟ 11ರಲ್ಲಿ ಪ್ರತಿ ಅಪ್ರೆಂಟಿಸ್‌ಗೆ ಭತ್ಯೆಯೊಂದಿಗೆ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪರಿಚಯಿಸಿದ್ದಾರೆ ಎಂದು ನನಗೆ ಸಂತೋಷವಾಗಿದೆ.
ಕಾಂಗ್ರೆಸ್ ಪ್ರಣಾಳಿಕೆಯ ಇತರೆ ವಿಚಾರಗಳನ್ನೇ ನಿರ್ಮಲಾ ಸೀತಾರಾಮನ್ ನಕಲು ಮಾಡಿದ್ದಾರೆ ಎಂದು ಹೇಳಲು ನಾನು ಬಯಸುತ್ತೇನೆ. ಉಳಿದ ಮಾಹಿತಿಯನ್ನು ನಾನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇನೆ ಎಂದು ಪಿ. ಚಿದಂಬರಂ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಶಶಿ ತರೂರ್: ಬಜೆಟ್ ಬಗ್ಗೆ ಟೀಕಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, “ಸಾಮಾನ್ಯ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಬಜೆಟ್‌ನಲ್ಲಿ ಏನನ್ನೂ ಹೇಳಲಿಲ್ಲ.
MNREGA ಬಗ್ಗೆ ಯಾವುದೇ ಉಲ್ಲೇಖವಿಲ್ಲ ಮತ್ತು ಆದಾಯವನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಸಾಕಷ್ಟು ಉಲ್ಲೇಖವಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯ ಆದಾಯದ ಅಸಮಾನತೆಯನ್ನು ಪರಿಹರಿಸುವಲ್ಲಿ ಮೋದಿ ಸರ್ಕಾರ ಸೋತಿದೆ.” ಎಂದಿದ್ದಾರೆ.
ಅಖಿಲೇಶ್: ಬಜೆಟ್ ಬಗ್ಗೆ ನಿರಾಶೆ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ರೈತರ ಸಮಸ್ಯೆಗಳನ್ನು ಪರಿಹರಿಸುವವರೆಗೆ ಮತ್ತು ಯುವಕರಿಗೆ ಉದ್ಯೋಗವನ್ನು ಖಾತ್ರಿ ಪಡಿಸುವವರೆಗೆ ಈ ಸರ್ಕಾರದಿಂದ ಜನರಿಗೆ ಪ್ರಯೋಜನವಿಲ್ಲ” ಎಂದು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….