ಬೆಂಗಳೂರು, (ಜುಲೈ.23); ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ NDA ಸರ್ಕಾರದ 3ನೇ ಅಧಿಕಾರಾವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ಸೀತಾರಾಮನ್ ಅವರು ಇಂದು ಮಂಡಿಸಿದ್ದು, ವಿಕಸಿತ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಕಲ್ಪಿಸುವ, ದೇಶದ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಯ ವೇಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಬಜೆಟ್ ಇದಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಮುಂದಿನ 5 ವರ್ಷಗಳ ರಾಷ್ಟ್ರದ ಪ್ರಗತಿಗೆ ಈ ಬಜೆಟ್ ದಿಕ್ಸೂಚಿಯಾಗಿದ್ದು, ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಸಾಮಾಜಿಕ ನ್ಯಾಯ, ಉತ್ಪಾದನೆ, ಸೇವಾ ವಲಯ, ಮೂಲಸೌಕರ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ.
ಕೃಷಿ ವಲಯದ ಉತ್ಪಾದಕತೆ ಹೆಚ್ಚಳಕ್ಕೆ ಮತ್ತಷ್ಟು ಅನುಕೂಲ ಕಲ್ಪಿಸಲು 1.52 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಹಾಗೆಯೇ, ವೇತನ ಪಡೆಯುವ ಉದ್ಯೋಗಿಗಳಿಗೆ ನೆರವಾಗಲು ಹೊಸ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆಯಲ್ಲಿ 17,500 ರೂ.ಗಳವರೆಗೆ ಉಳಿತಾಯವಾಗುವಂತೆ ಸುಧಾರಣೆ ತರಲಾಗಿದೆ.
ದೇಶದ ಪ್ರತಿಯೊಬ್ಬ ನಾಗರಿಕನನ್ನು ಸಬಲೀಕರಣಗೊಳಿಸುವ ಮತ್ತು ಸಮೃದ್ಧ, ಸಶಕ್ತ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಸರ್ವಸ್ಪರ್ಶಿ, ಅಭಿವೃದ್ಧಿ ಪೂರಕ ಬಜೆಟ್ ಅನ್ನು ವಿತ್ತ ಸಚಿವರು ಮಂಡಿಸಿದ್ದಾರೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….