Doddaballapura; ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ ಕನ್ನಡ ಪಕ್ಷದಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ, (ಜುಲೈ.23); ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾಗಿದ್ದು, ಯಾವುದೇ ಕಾರಣಕ್ಕೂ ಈ ನಿರ್ಧಾರದಿಂದ ಹಿಂದೆ ಸರಿಯದೇ ಕನ್ನಡಿಗರಿಗೆ ಉದ್ಯೋಗ ನೀಡುವ ಮಸೂದೆಯನ್ನು ಜಾರಿ ಮಾಡಬೇಕು ಎಂದು ಕನ್ನಡ ಪಕ್ಷದ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕನ್ನಡ ಪಕ್ಷದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಸಂಜೀವ್ ನಾಯಕ್, ಪ್ರಧಾನ ಕಾರ್‍ಯದರ್ಶಿ ಡಿ.ಪಿ.ಆಂಜನೇಯ, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಚಾರ 60ರ ದಶಕದಿಂದಲೂ ಚರ್ಚೆಯಾUಗುತ್ತಲೇ ಇದೆ. 50 ವರ್ಷಗಳಿಂದಲೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಬಂದಂತಹ ಎ ಸರ್ಕಾರಗಳು ಕನ್ನಡಿಗರಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿವೆ. 

ಈ ದಿಸೆಯಲ್ಲಿ ರೂಪುಗೊಂಡಿರುವ ಡಾ.ಸರೋಜಿನಿ ಮಹಿಷಿ ವರದಿ ಯಥಾವತ್ತಾಗಿ ಜಾರಿಯಾಗಬೇಕಿದೆ. ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಜಾರಿಗೆ ತರುವ ಘೋಷಣೆ ಮಾಡಿದ್ದರು. ಆದರೆ ಕೆಲ ಉದ್ಯಮಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಮಸೂದೆ ನೆನೆಗುದಿಗೆ ಬಿದ್ದಿದೆ. 

ಇಲ್ಲಿನ ನೆಲ, ಜಲ ಸವಲತ್ತುಗಳನ್ನು ಬಳಸಿಕೊಂಡು ಸ್ಥಳೀಯ ಕನ್ನಡಿಗರಿಗೆ ಕೆಲಸ ನೀಡುವುದಿಲ್ಲ ಎನ್ನುವ ಉದ್ಘಟತನದ ಹೇಳಿಕೆ ನೀಡಿರುವುದು ಖಂಡನೀಯವಾಗಿದೆ. ಇಂದು ನೂರಾರು ವಿಶ್ವಿವಿದ್ಯಾನಿಲಯಗಳಲ್ಲಿ ಲಕ್ಷಾಂತರ ಮಂದಿ ಪದವಿಪಡೆದು ಹೊರಬರುತ್ತಿದ್ದಾರೆ.

ಉದ್ಯೋಗಗಳ ಅವಕಾಶಗಳು ಹೆಚ್ಚಾಗುತ್ತಿದ್ದರೂ ಸ್ಥಳೀಯರಿಗೆ ಉದ್ಯೋಗ ದೊರೆಯುತ್ತಿಲ್ಲ. ಕನ್ನಡಿಗರಿಗೆ ಉದ್ಯೋಗ ನೀಡದಿದ್ದರೆ ಈ ಐಟಿ-ಬಿಟಿ ಕಂಪನಿಗಳು ಕರ್ನಾಟಕದಿಂದ ಹೊರಹೋಗಬೇಕು. ಆದರೆ ನುಡಿದಂತೆ ನಡೆಯುತ್ತೇವೆಂದು ಹೇಳುವ ಮುಖ್ಯಮಂತ್ರಿಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ವಿಚಾರದಲ್ಲಿ ಸ್ಪಷ್ಟವಾದ ನಿಲುವನ್ನ ಪ್ರಕಟಿಸಬೇಕು ಮತ್ತು ಅದು ಶಾಸನವಾಗಬೇಕು ಇದೀಗ ನಡೆಯುತ್ತಿರುವ ವಿಧಾನಮಂಡಲದ ಅವೇಶನದಲ್ಲಿ ಈ ವಿಚಾರವನ್ನು ತಾವು ಮಂಡಿಸಿ ಕನ್ನಡಿಗರಿಗೆ ಇದುವರೆಗೂ ಆಗಿರುವ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರ ಬಹುದಿನದ ಬೇಡಿಕೆ ಈಡೇರಿಕೆಗೆ ಕನ್ನಡ ಪಕ್ಷ ಒತ್ತಾಯಿಸುತ್ತದೆ.

ಸರೋಜಿನಿ ಮಹಿಸಿ ವರದಿ ಅನ್ವಯ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲೂ ಸಹ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಕನ್ನಡ ಪಕ್ಷ ಒತ್ತಾಯಿಸುತ್ತದೆ ಎಂದರು.

ಕನ್ನಡ ಪಕ್ಷದ ಜಿಲ್ಲಾ ಅಧ್ಯಕ್ಷ ಎಚ್.ಮುನಿಪಾಪಯ್ಯ, ತಾಲೂಕು ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಬಹುರಾಷ್ಟ್ರೀಯ ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡದೇ ವಂಚಿಸುತ್ತಲೇ ಬಂದಿವೆ. ಡಿ.ದರ್ಜೆಯ ಉದ್ಯೋಗಗಳೂ ಸಹ ಪರರ ಪಾಲಾಗುತ್ತಿವೆ. ಈ ನಿಟ್ಟಿನಲ್ಲಿ ಕನ್ನಡಿಗರು ಸಂಘಟಿತರಾಗಿ ಹೋರಾಟ ಮಾಡದಿದ್ದರೆ ನಮ್ಮ ಅಸ್ತಿತ್ವ ಕಳೆದುಕೊಳ್ಳಬೇಕಾಗುತ್ತದೆ ಎಂದರು.

ಪ್ರತಿಭಟನೆಯಲ್ಲಿ ತಾಲೂಕು ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ  ಜಿ.ರಾಮು, ಕನ್ನಡ ಪಕ್ಷದ ತಾಲೂಕು ಉಪಾಧ್ಯಕ್ಷ ಗುರು ಮೂರ್ತಿ, ಪ್ರಧಾನ ಕಾರ್‍ಯದರ್ಶಿ ಬೋರೇಗೌಡ, ಮುಖಂಡರಾದ  ಮೋಹನ್ ಕುಮಾರ್, ಮುನಿರಾಜು, ಉಮಾಶಂಕರ್, ಸೂರ್‍ಯನಾರಾಯಣ್, ಸಿದ್ದರಾಜು, ಮಂಜುನಾಥ, ನರಸಿಂಹಮೂರ್ತಿ ಮೊದಲಾದವರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!