ಬೆಂಗಳೂರು, (ಜುಲೈ.23); ಕೇಂದ್ರ ಸರ್ಕಾರ ಇಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಹೊರಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಹೊರಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮೋದಿ ಇಡಿಗೆ ಧಿಕ್ಕಾರ, ಅಮಿತ್ ಶಾ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ವಾಲ್ಮೀಕಿ ನಿಗಮ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಅಧಿಕಾರಿಗಳನ್ನು ಒತ್ತಾಯಿಸಲಾಗುತ್ತಿದೆ ಎಂದು ಇಡಿ ವಿರುದ್ಧ ದೂರು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳನ್ನು ಬಂಧಿಸಿ ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಎಫ್ ಐ ಆರ್ ದಾಖಲು : ಮಾಜಿ ಸಚಿವ ಬಿ.ನಾಗೇಂದ್ರ ಹೆಸರೇಳುವಂತೆ ಇಡಿ ಅಧಿಕಾರಿಗಳಿಂದ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ಅವರಿಂದ ಪೊಲೀಸರಿಗೆ ದೂರು ನೀಡಲಾಗಿದ್ದು, ಎಫ್ ಐ ಆರ್ ದಾಖಲು ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….