ದೊಡ್ಡಬಳ್ಳಾಪುರ, (ಜುಲೈ.27); ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನಲ್ಲಿರುವ ಮಾಡೇಶ್ವರ ಗ್ರಾಮದಲ್ಲಿ ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಮಾಡೇಶ್ವರ ಗ್ರಾಮದ ರೈತ ನವೀನ್ ಕುಮಾರ್ ರವರಿಗೆ ಸೇರಿದ ಹಸುವೊಂದು, ಜಮೀನಿನಲ್ಲಿ ಮೇಯುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದ್ದು, ಹಸು ಕಿರುಚಿದ ಶಬ್ದ ಕೇಳಿಸಿದೆ. ಸುತ್ತಮುತ್ತಲಲಿದ್ದ ಗ್ರಾಮಸ್ಥರು ಹೋಗುವ ವೇಳೆಗೆ ಚಿರತೆ ಹಸುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿ, ಅಲ್ಲಿಂದ ಕಾಲ್ಕಿತ್ತಿದೆ.
ಘಟನೆಯಿಂದ ಹೈನುಗಾರಿಕೆಯ ಮೇಲೆ ಅವಲಂಬಿತವಾಗಿದ್ದ ನವೀನ್ ಕುಮಾರ್ ಕುಟುಂಬ ಕಂಗಾಲಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಕೃಷಿ ಹಾಗೂ ಹೈನುಗಾರಿಕೆ ಮಾಡಲು ರೈತರಿಗೆ ತೀವ್ರ ತೊಂದರೆ ಎದುರಿಸುವಂತಾಗಿದೆ.
ಹಸು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಗ್ರಾಮಸ್ಥರು ಚರತೆಯಿಂದ ಆತಂಕಕ್ಕೆ ಒಳಗಾಗಿದ್ದು, ಅರಣ್ಯ ಇಲಾಖೆಯು ಚಿರತೆ ಹಿಡಿಯಲು ಬೋನ್‌ಗಳನ್ನು ಅಳವಡಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

