ಬೆಂಗಳೂರು, (ಜುಲೈ.28); ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಇಂದು ನಗರದಲ್ಲಿ ನಡೆದ ಬಿಜೆಪಿ- ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ.
ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.
10ರಂದು ಶನಿವಾರ ಸಮಾರೋಪ ನಡೆಯಲಿದೆ; ಅವತ್ತು ನಮ್ಮ ಕೇಂದ್ರದ ನಾಯಕರೂ ಬರಲಿದ್ದಾರೆ ಎಂದು ತಿಳಿಸಿದರು.
ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಮುಖಂಡ ಮತ್ತು ಕೇಂದ್ರದ ಸಚಿವ ಕುಮಾರಸ್ವಾಮಿ, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಹಗರಣಗಳ ಕುರಿತು ಚರ್ಚಿಸಲಾಗಿದೆ. ಬಳಿಕ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾಗಿ ವಿವರ ನೀಡಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ದುರ್ಬಳಕೆ ಆಗಿದೆ. ಮೂಡದಲ್ಲಿ ಸಾವಿರಾರು ಕೋಟಿ ರೂಪಾಯಿಯ ಹಗರಣ ನಡೆದಿದೆ ಎಂದು ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

