ಪ್ಯಾರಿಸ್, (ಜುಲೈ.28); ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಮನು ಭಾಕರ್ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು ಕಂಚಿನ ಪದಕ ಗೆದ್ದಿದ್ದಾರೆ.

ಹರಿಯಾಣ ಮೂಲದ ಮನು ಭಾಕರ್ ಚೊಚ್ಚಲ ಪದಕ ಗೆದ್ದಿದ್ದಾರೆ. ಇನ್ನು ಒಲಿಂಪಿಕ್ಸ್ ನಲ್ಲಿ ಮೊದಲ ಪದಕ ಗೆದ್ದ ಭಾರತೀಯ ಮಹಿಳೆ ಎಂಬ ಖ್ಯಾತಿಗೂ ಮನು ಭಾಕರ್ ಭಾಜನರಾಗಿದ್ದಾರೆ.
ಈ ಪಂದ್ಯದಲ್ಲಿ ದಕ್ಷಿಣ ಕೊರಿಯಾದ ವೈಜೆ ಓ 243.2 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರೆ ದಕ್ಷಿಣ ಕೊರಿಯಾದ ವೈಜೆ ಕಿಮ್ 241.3 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
