ಎಲ್ಲ ಸಮುದಾಯಗಳ ಆಶೋತ್ತರ ಈಡೇರಿಸಲು ಹೊಸ ಮೀಸಲಾತಿ ನೀತಿ ಅಗತ್ಯವಿದೆ: ಬಸರಾಜ ಬೊಮ್ಮಾಯಿ

ಗದಗ, (ಜುಲೈ.28); ಹೆಚ್ಚಾಗಿರುವ ಜನಸಂಖ್ಯೆ. ಜನರ ಬೇಡಿಕೆ ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸುವ ಹೊಸ ಮೀಸಲಾತಿ ನೀತಿ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

ಅವರು ಇಂದು ಗದಗ ಎಪಿಎಂಸಿಯಲ್ಲಿರುವ ಕೆ.ಎಚ್.ಪಾಟೀಲ್ ಸಭಾಭವನದಲ್ಲಿ ಏರ್ಪಡಿಸಿದ್ದ ಪಂಚಮಸಾಲಿ ಸಮಾಜದ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈಗ ದೇಶದಲ್ಲಿ ಮೀಸಲಾತಿ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಎಲ್ಲ ಸಮುದಾಯಗಳು: ಮೀಸಲಾತಿ ಕೇಳುತ್ತಿವೆ. ಕಾರಣ ಶಿಕ್ಷಣ ಕಲಿತು ಜಾಗೃತರಾಗಿದ್ದಾರೆ. ನಮ್ಮ ಮಕ್ಕಳು ವಿದ್ಯಾವಂತರಾಗಿ ದೊಡ್ಡವರಾಗಬೇಕು ಎಂಬ ಆಸೆಯಿಂದ ಎಲ್ಲರೂ ಮೀಸಲಾತಿ ಕೇಳುತ್ತಿದ್ದಾರೆ. ಆದರೆ, ಸಮಸ್ಯೆ ಇರುವುದು ಒಟ್ಟಾರೆ ಶೇ 50 ರಷ್ಟು ಮಾತ್ರ ಮೀಸಲಾತಿ ನೀಡಲು ಅವಕಾಶ ಇದೆ. ಬೆಳೆದಿರುವ ಜನಸಂಖ್ಯೆ ಹೆಚ್ಚಾಗಿರುವ ಜನರ ಬೇಡಿಕೆ ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲ ಸಮುದಾಯಗಳ ಅಶೋತ್ತರಗಳನ್ನು ಈಡೇರಿಸುವಂತೆ ಮೀಸಲಾತಿ ನೀತಿ ಜಾರಿಗೆ ತರುವುದು ಅವಶ್ಯಕತೆ ಇದೆ. ಹೀಗಾಗಿ ಈ ವಿಚಾರವನ್ನು ಮುಂದಿನ ದಿನಗಳಲ್ಲಿ ಸಂಸತ್‌ನಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.

ನಾನು ಅಧಿಕಾರದಲ್ಲಿ ಇದ್ದಾಗ ಎಸ್ಸಿ ಸಮುದಾಯದ ಮೀಸಲಾತಿ ಶೇ 15 ರಿಂದ ಶೇ 17, ಎಸ್ಪಿ ಸಮುದಾಯದ ಮೀಸಲಾತಿ ಪ್ರಮಾಣ ಶೇ 3 ರಿಂದ ಶೇ 7ಕ್ಕೆ ಹೆಚ್ಚಳ ಮಾಡಿದ್ದೇವು. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು ಶೇ 2ರಷ್ಟು ಹೆಚ್ಚಳ ಮಾಡಿದೆವು. ಆದರೆ, ಮತ್ತೆ ಶೇ 50 % ಮೀಸಲಾತಿ ಮಿತಿ ಇರುವುದರಿಂದ ಕಾನೂನು ಸಂಘರ್ಷ ಏರ್ಪಟ್ಟಿದೆ. ನಾವು ಏನು ಮಾತನಾಡಿದ್ದೇವೆ ಅದರಂತೆ ನಡೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಸಮಾಜಕ್ಕೆ ನ್ಯಾಯ ಕೊಡಿಸಲು ದಿಟ್ಟ ಹೋರಾಟ ಆಗತ್ಯವಿದೆ. ಅದಕ್ಕಾಗಿ ನಾನು ಸಿದ್ದನಿದ್ದೇನೆ ಎಂದರು.

ಬಸವಣ್ಣನವರು ಕಾಯಕವೇ ಕೈಲಾಸ ಅಂತ ಹೇಳಿದ್ದಾರೆ. ನಾವೆಲ್ಲರೂ ಮಾತಿಗಿಂತ ಕೃತಿ ಮೇಲು ಎಂದು ನಂಬಿದವರು. ಬರುವ ದಿನಗಳಲ್ಲಿ ಸಮಾಜವನ್ನು ಶೈಕಣೀಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢಗೊಳಿಸುವ ಕೆಲಸ ಮಾಡಬೇಕು. ಪ್ರತಿಯೊಬ್ಬರು ಕೂಡ ಸಮೃದ್ಧಿ ಸಂತೋಷದಿಂದ ಬಾಳಬೇಕೆಂದರೆ ಈಗಿನಿಂದಲೇ ಬೀಜ ಬಿತ್ತಿ ನಿರಂತರ ಪಯತ್ನ ಮಾಡಬೇಕು. ಸಮಾಜ ಕಟ್ಟುವ ಕೆಲಸ ಅಂದರೆ ನಿರಂತರ ಕೆಲಸ ಮಾಡಬೇಕು. ಮಾತಿನ ಮಂಟಪದಿಂದ ಸಮಾಜ ಕಟ್ಟಲು ಸಾಧ್ಯವಿಲ್ಲ. ಮಾತುಗಳು ನಮಗೆ ಸ್ಫೂರ್ತಿಯಾಗಬೇಕು. ಆ ಮಾತಿನಂತೆ ಕೆಲಸ ಮಾಡಿದರೆ ನಾವು ಗುರಿ ಮುಟ್ಟಲು ಸಾಧ್ಯವಿದೆ ಎಂದು ಹೇಳಿದರು.

ಪಂಚಮಸಾಲಿ ಸಂಘ ಹುಟ್ಟು ಹಾಕಿರುವುದು ಒಳ್ಳೆಯ ದಾರಿಯಲ್ಲಿ ನಡೆಯುತ್ತಿದೆ. ಪಂಚಮಸಾಲಿ ಸಮುದಾಯ ರೈತಾಪಿ ವರ್ಗದಿಂದ ಕೂಡಿರುವ ಸಮಾಜ. ಒಕ್ಕಲುತವನ್ನು ನಂಬಿರುವ ಸಮಾಜ, ನಮ್ಮ ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ, ಭೂಮಿ ಮಾತ್ರ ಅಷ್ಟೇ ಇದೆ. ಮೊದಲು ಒಂದು ಮನೆಯಲ್ಲಿ ನಾಲ್ಕು ಜನ ಮಕ್ಕಳಿದ್ದರು. ಆದರೆ, ಈಗ ಅವರಿಗೆ ಮಕ್ಕಳಾಗಿದ್ದಾರೆ. ಆದರೆ, ಭೂಮಿ ಮಾತ್ರ ಅಷ್ಟೇ ಇದೆ. ಹೀಗಾಗಿ ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಕೆಲಸ ಮಾಡಬೇಕು. ನಮ್ಮ ಮಕ್ಕಳು ಬುದ್ದಿವಂತಿಕೆಯಲ್ಲಿ ಕಡಿಮೆಯಿಲ್ಲ. ಅವರಿಗೆ ಸೂಕ್ತ ತರಬೇತಿ ನೀಡಿದರೆ, ಜಗತ್ತಿನಲ್ಲಿ ಅವರು ಎಲ್ಲವನ್ನೂ ಸಾಧಿಸುತ್ತಾರೆ. ಸರ್ಕಾರಗಳು ಅನೇಕ ಯೋಜನೆಗಳನ್ನು ಹಾಕಿಕೊಳ್ಳುತ್ತವೆ. ಅವುಗಳನ್ನು ನಮ್ಮ ಸಮಾಜದ  ಗ್ರಾಮೀಣ ಭಾಗದ ಮಕ್ಕಳಿಗೆ ತಲುಪಿಸುವ ಜವಾಬ್ದಾರಿಯನ್ನು ಸಮಾಜ ತೆಗೆದುಕೊಳ್ಳಬೇಕು ಎಂದರು.

ಒಂದು ಕಾಲದಲ್ಲಿ ಜಮೀನು ಇದ್ದವರು ಜಗತ್ತು ಆಳುತ್ತಿದ್ದರು. ನಂತರ ಹಣ ಇದ್ದವರು ಜಗತ್ತು ಆಳಿದರು. ಇದು 21ನೇ ಶತಮಾನ ಈಗ ಜ್ಞಾನ ಇದ್ದವರ ಕಾಲ, ಯಾರ ಬಳಿ ಜ್ಞಾನ ಇದೆ ಅವರು ಜಗತ್ತು ಆಳುತ್ತಾರೆ. ಹೇಗೆ ಜಗತ್ತು ಬದಲಾಗುತ್ತದೆ ಹಾಗೇ ನಮ್ಮ ಮಕ್ಕಳು ಬದಲಾವಣೆಗೆ ಹೊಂದಿಕೊಂಡರೆ ಆರ್ಥಿಕವಾಗಿ ಯಾವುದೇ ತೊಂದರೆಯಾಗುವುದಿಲ್ಲ. ಆ ನಿಟ್ಟಿನಲ್ಲಿ ನಮ್ಮ ಪಯತ್ನ ಇರಬೇಕು ಎಂದರು.

ಪ್ರಜಾಪಭುತ್ವ ಯಶಸ್ವಿಯಾಗಬೇಕೆಂದರೆ ಸಂಘಟಿತ ಹೋರಾಟ ಅಗತ್ಯವಿದೆ. ಕೆಲವರು ಜಾತಿ ಮಾಡುತ್ತಾರೆ ಎಂದು ಹೇಳುತ್ತಾರೆ. ದೇಶದ 140 ಕೋಟಿ ಜನರನ್ನು ಅಭಿವೃದ್ಧಿ ಮಾಡುವುದು ಹೇಗೆ. ಆಯಾ ಸಮಾಜಗಳು ಸಂಘಟಿತವಾಗಿ ಬೆಳೆದರೆ, ಇಡೀ ದೇಶ ಜಾಗೃತಗೊಂಡು ದೇಶ ಬೆಳೆಯುತ್ತದೆ. ಪಂಚಮಸಾಲಿ ಸಮುದಾಯ ಈಗ ಜಾಗೃತವಾಗಿದೆ. ಈ ಸಮಾಜದ ಜೊತೆಗೆ ನಾನು ಯಾವಾಗಲೂ ಇರುತ್ತೇನೆ. ನಿಮ್ಮ ಸಹೋದರ ದೆಹಲಿಯಲ್ಲಿ ನಿಮ್ಮ ಪರವಾಗಿದ್ದಾನೆ ಎಂದು ಹೇಳಿದರು.

ಮಾಜಿ ಸಚಿವರು ಹಾಗೂ ಶಾಸಕರಾದ ಸಿ. ಸಿ ಪಾಟೀಲರು ಜನಪರ ಶಾಸಕರು ಅವರು ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ಜನಪರ ಕೆಲಸ ಮಾಡುತ್ತಾರೆ. ಅವರ ಶಕ್ತಿಯನ್ನು ಸಮಾಜ ಬಳಕೆ ಮಾಡಿಕೊಳ್ಳಬೇಕು. ನಾವು ನಿಮ್ಮ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಸ್ವಾಮೀಜಿ, ಸಚಿವರಾದ ಎಚ್.ಕೆ. ಪಾಟೀಲ್, ಮಾಜಿ ಸಚಿವ ಸಿ.ಸಿ. ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]