ಮೂಗಿನಲ್ಲಿ ರಕ್ತಸ್ರಾವ: JDS ಕಾರ್ಯಕರ್ತರು, ರಾಜ್ಯದ ಜನತೆಗೆ ಸಂದೇಶ ನೀಡಿದ ಕುಮಾರಣ್ಣ

ಬೆಂಗಳೂರು, (ಜುಲೈ.28): ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.

ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು.

ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.

ಯಾರಿಗೂ ಆತಂಕ ಬೇಡ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು.

ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು ಅವರು.

ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

92 ವರ್ಷಗಳ ದೇವೇಗೌಡರು ನಾಳೆಯ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ‌ ಇರಬೇಕು ಎಂದು ಕೇಂದ್ರ ಸಚಿವರು ಹೇಳಿದರು.

ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. 

ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದ ಅವರು, ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]