ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 29): 2024-25ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ (ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಪ್ಯೂಟ್ ಮತ್ತು ಹೂ ಬೆಳೆ), ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಸಿರುಮನೆ ನಿರ್ಮಾಣ, ವೈಯಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್, ಬೀಜ ಸಂಸ್ಕರಣಾ ಘಟಕ ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.   

2024-25ನೇ ಸಾಲಿನ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ಆಸಕ್ತಿಯುಳ್ಳ ರೈತರು ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು, ಸರ್ಕಾರ ನಿಗಧಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸುವುದು.

ಮಲ್ಲಿಕಾರ್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೇವನಹಳ್ಳಿ – 9480461234, ಶಶಿಕಲಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೊಡ್ಡಬಳ್ಳಾಪುರ- 9482129648, ರೇಖಾ ಬಿ.ಪಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹೊಸಕೋಟೆ- 8217210320, ಹರೀಶ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ- 9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!