ಚಿತ್ರದುರ್ಗ, (ಜುಲೈ.29); ಶಸ್ತ್ರ ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೋರ್ವರ ಬಳಿ 4 ಸಾವಿರ ರೂಪಾಯಿ ಲಂಚ ಪಡೆದಿದ್ದ ಆರೋಪದಡಿ ಆಸ್ಪತ್ರೆಯ ಸರ್ಜನ್ ಡಾ.ಸಾಲಿ ಮಂಜಪ್ಪ ಎಂಬುವವರನ್ನು ಆರೋಗ್ಯ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ ಎಂಬುವವರ ಕುಟುಂಬದ ಬಳಿ ಶಸ್ತ್ರಚಿಕಿತ್ಸೆ ಬಗ್ಗೆ ಚರ್ಚಿಸುವಾಗ, ಡಾಕ್ಟರ್ ಸಾಲಿ ಮಂಜಪ್ಪ ಜು.6ರಂದು ಹಣ ಪಡೆದಿದ್ದಾನೆ ಎಂಬ ಕುರಿತಾದ ವಿಡಿಯೋ ಮಾಧ್ಯಮಗಳಲ್ಲಿ ಹರಿದಾಡಿತ್ತು. ಅದು ವೈರಲ್ ಆಗಿ ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಸಂಬಂಧ ಕಾರಣ ಕೇಳಿಯೂ ಇಲಾಖೆ ಡಾ.ಸಾಲಿ ಮಂಜಪ್ಪ ಅವರಿಗೆ ನೋಟಿಸ್ ಸಹ ನೀಡಿತ್ತು.
ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಭ್ರಷ್ಟಾಚಾರ ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ, ಸರ್ಕಾರಿ ಸೇವೆಯಿಂದ ಡಾ.ಸಾಲಿ ಮಂಜಪ್ಪರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….