ಬೈಲಹೊಂಗಲ, (ಜುಲೈ.29): ಸಮೀಪದ ಮಾಟೊಳ್ಳಿ, ಮಲ್ಲೂರ, ಹೊಸೂರ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ.
ಕಣಕುಂಬಿ ಹಾಗೂ ಖಾನಾಪೂರ ಅರಣ್ಯ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮಲಪ್ರಭಾ ನದಿಯ ಒಡಲು ದಿನೇ, ದಿನೇ ಹೆಚ್ಚುತ್ತಿದ್ದು ಒಡಲು ತುಂಬಿ ಉಕ್ಕಿ ಹರಿಯುತ್ತಿದೆ. ಹರಿಯುವ ನದಿಯ ನೀರಿನಲ್ಲಿ ಸರಾಗ ಹರಿದು ಬರುತ್ತಿರುವ ಬೃಹತ್ ಗಾತ್ರದ ಮೊಸಳೆ ನದಿ ಪಾತ್ರದ ಗ್ರಾಮಸ್ಥರಲ್ಲಿ, ರೈತರಲ್ಲಿ ಆತಂಕ ಸೃಷ್ಠಿಸಿದೆ
ನದಿಯ ದಂಡೆಯ ಮೇಲೆ ಆಗಾಗ ಕಾಣ ಸಿಕೊಳ್ಳುತ್ತಿರುವ ಬೃಹತ್ ಗಾತ್ರದ ಮೊಸಳೆಗಳನ್ನು ಯುವಕರು ಮೊಬೈಲ್ ಕ್ಯಾಮೆರಾಗಳಲ್ಲಿ ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಮೊಸಳೆ ನದಿಯ ದಡದಲ್ಲಿ ವಿಶ್ರಮಿಸಿ ಮರಳಿ ನದಿಗೆ ಜಾರುವ ವಿಡಿಯೋ ದೃಶ್ಯ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿವೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ನದಿ ಪಾತ್ರದಲ್ಲಿ ಕಾಣಸಿಕೊಳ್ಳುತ್ತಿರುವ ಮೊಸಳೆಯನ್ನು ಸೆರೆ ಹಿಡಿದು ಮುಂದಾಗುವ ಅನಾಹುತ ತಪ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಕುರಿತು ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ತಹಶೀಲ್ದಾರ ಹನುಮಂತ ಶಿರಹಟ್ಟಿ, ಮುಖ್ಯಾಧಿಕಾರಿ ವಿರೇಶ ಹಸಬಿ ಸುದ್ದಿಗಾರರೊಂದಿಗೆ ಮಾತನಾಡಿ, ನದಿ ಪಾತ್ರದ ಗ್ರಾಮಸ್ಥರು, ರೈತರು ಜಾಗೃತೆ ವಹಿಸುವಂತೆ ಕೋರಿದ್ದಾರೆ ಎಂದು ಬೆಳಗಾವಿ ವಾಯ್ಸ್ ವರದಿ ಮಾಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….