ಬೆಂಗಳೂರು, (ಜುಲೈ.29); ಭಾನುವಾರ ರಾತ್ರಿ ಬಿಬಿಎಂಪಿ ಕಸದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಕೆ.ಆರ್.ಸರ್ಕಲ್ ಬಳಿ ಸಂಭವಿಸಿದೆ.
ಮೃತರನ್ನು ಬಾಣಸವಾಡಿಯ ಪ್ರಶಾಂತ್, ಶಿಲ್ಪಾ ಎಂದು ಗುರುತಿಸಲಾಗಿದೆ.
ಟಿಸಿಎಸ್ನಲ್ಲಿ ಕೆಲಸ ಮಾಡ್ತಿದ್ದ ಪ್ರಶಾಂತ್ ಹಾಗೂ ಶಿಲ್ಪಾ ಊಟಕ್ಕೆಂದು ಮೆಜೆಸ್ಟಿಕ್ನಿಂದ ಕೆ.ಆರ್.ವೃತ್ತದ ಕಡೆಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಇವರ ಮೇಲೆ ಲಾರಿ ಹರಿದಿದೆ. ಘಟನೆಯ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ನನ್ನ ಮಗ ಇದೇ ಮಾರ್ಥಾಸ್ ಆಸ್ಪತ್ರೆಯಲ್ಲಿ ಜನಿಸಿದ್ದ ಈಗ ಇದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆಂದು ಎಂದು ಪ್ರಶಾಂತ್ ಪೋಷಕರು ಕಣ್ಣೀರು ಹಾಕಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಮೊಮ್ಮಗನ ಸಾವಿನ ವಿಚಾರ ತಿಳಿದು ಅಜ್ಜಿ ಕುಸಿದು ಬಿದ್ದಿದ್ದಾರೆ.
ಸ್ಥಳಕ್ಕೆ ಹಲಸೂರು ಗೇಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಚಾಲಕನನ್ನು ಕೂಡಲೇ ಬಂಧಿಸಬೇಕು. ನಮಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ನಾನು, ನನ್ನ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರ ಬಳಿ ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….