ಬೆಂಗಳೂರು, (ಜುಲೈ.30): ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯರನ್ನು ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಂದಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಕುರಿತಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 184ಕ್ಕೆ ತದ್ದುಪಡಿ ತರುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅತ್ಯಾಚಾರ ಮತ್ತು ಕೊಲೆ ಯತ್ನ ಆರೋಪ ಎದುರಿಸುತ್ತಿದ್ದು, ಜಾಮೀನು ಕೋರಿ ಅಜಯ್ ಕುಮಾರ್‌ಭೇರಾ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನ್ಯಾಯಪೀಠ ಈ ಸೂಚನೆ ನೀಡಿದೆ.

ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್164(ಎ) ಅಡಿಯಲ್ಲಿ ಯಾವುದೇ (ಪುರುಷ-ಮಹಿಳೆ) ನೋಂದಾಯಿತ ವೈದ್ಯರು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಪರೀಕ್ಷಿಸಬಹುದಾಗಿತ್ತು. ಅದೇ ನಿಯಮವನ್ನು ಬಿಎನ್ಎಸ್ 184 ಅಡಿಯಲ್ಲಿ ಯಥಾವತ್ತಾಗಿ ಉಲ್ಲೇಖಿಸಲಾಗಿದೆ.
ಆದರೆ, ಇದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಯರಿಗೆ ಅನ್ಯಾಯ, ಮುಜುಗರ ಉಂಟಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
