ಕಾಂಗ್ರೆಸ್ ಹಿರಿಯ ಮುಖಂಡ ಸಿಡಿ ಸತ್ಯನಾರಾಯಣ ಗೌಡ ಅಗಲಿಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ..!

ದೊಡ್ಡಬಳ್ಳಾಪುರ, (ಜುಲೈ.30); ತಾಲೂಕಿನ ಹಿರಿಯ ರಾಜಕಾರಣಿ ಸಿಡಿ ಸತ್ಯನಾರಾಯಣ ಗೌಡ (86 ವರ್ಷ) ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ‌.

ಜ್ವರದ ಕಾರಣ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಿಡಿ ಸತ್ಯನಾರಾಯಣ ಗೌಡ ಅವರು, ಲೋ ಬಿಪಿಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೃತರಿಗೆ ಪತ್ನಿ, ಹೈಕೋರ್ಟ್ನಲ್ಲಿ ಹಿರಿಯ ವಕೀಲರಾಗಿರುವ ಸಿ.ಎಸ್.ಗಿರೀಶ್ ಕುಮಾರ್ ಸೇರಿದಂತೆ ಮೂರು ಜನ ಪುತ್ರರು ಇದ್ದಾರೆ.

ಮೃತರ ಅಂತ್ಯಕ್ರಿಯೆ ಚನ್ನಾದೇವಿಅಗ್ರಹಾರ ಗ್ರಾಮದಲ್ಲಿ ಮಂಗಳವಾರ ನಡೆಯಿತು. ಇದಕ್ಕೂ ಮುನ್ನ ಸತ್ಯನಾರಾಯಣ ಗೌಡ ಅವರಗೆ ಅಂತಿಮ ನಮನ ಸಲ್ಲಿಸಲು ಸ್ವಗೃಹದ ಬಳಿ ಅವಕಾಶ ಕಲ್ಪಿಸಲಾಗಿತ್ತು.

ಮಾಜಿ ಸಿಎಂ ಡಾ.ಎಂ.ವೀರಪ್ಪಮೊಯ್ಲಿ, ವಿಧಾನಪರಿಷತ್ ಸದಸ್ಯ ರವಿ, ಮಾಜಿ ಸದಸ್ಯರಾದ ಅ.ದೇವೇಗೌಡ, ಇ.ಕೃಷ್ಣಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಸದಸ್ಯ ಜಿ.ಲಕ್ಷ್ಮೀಪತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಪಿ ಜಗನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ನಿರ್ದೇಶಕರಾದ ಅಂಜನಮೂರ್ತಿ, ರಾಮಣ್ಣ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್ ಸೇರಿದಂತೆ ಅನೇಕ ಮುಖಂಡರು ಅಂತಿಮ ನಮನ ಸಲ್ಲಿಸಿದರು.

ಡಿಕೆಶಿ ಸಂತಾಪ; ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿಡಿ ಸತ್ಯನಾರಾಯಣ ಗೌಡ ಅವರ ಅಗಲಿಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಅವರು, ಸತ್ಯನಾರಾಯಣ ಗೌಡ ಅವರ ಪುತ್ರ, ವಕೀಲರಾದ ಗಿರೀಶ್ ಕುಮಾರ್ ಅವರಿಗೆ ಕರೆ ಮಾಡಿ ಸಂತಾಪವನ್ನು ಸೂಚಿಸಿದ್ದು, ದೇಹಲಿಯಿಂದ ಹಿಂತಿರುಗಿದ ನಂತರ ಸ್ವಗೃಹಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಅಂತೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೂಡ ಸಂತಾಪ ಸೂಚಿಸಿದ್ದಾರೆ.

ಮಧುರೆ ಹೋಬಳಿಯ ಚನ್ನಾದೇವಿ ಅಗ್ರಹಾರ ಗ್ರಾಮದ ಸಿ.ಡಿ.ಸತ್ಯನಾರಾಯಣಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಅವರು ದೊಡ್ಡಬಳ್ಳಾಪುರಕ್ಕೆ ಬಂದಾಗಲು ಅವರೊಂದಿಗೆ ಹೆಚ್ಚು ಪರಿಚಯ ಇದ್ದವರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯರೊಂದಿಗೆ ನಿಕಟ ಸ್ನೇಹ ಹೊಂದಿದ್ದರು. 

1996ರಲ್ಲಿ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕನಸವಾಡಿಯಲ್ಲಿನ ಶ್ರೀಶನಿಮಹಾತ್ಮ ದೇವಾಲಯ ಸಮಿತಿಯ ಕಾರ್ಯದರ್ಶಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!