ದೊಡ್ಡಬಳ್ಳಾಪುರ, (ಜುಲೈ.30); ತಾಲೂಕಿನ ಹಿರಿಯ ರಾಜಕಾರಣಿ ಸಿಡಿ ಸತ್ಯ ನಾರಾಯಣ ಗೌಡ ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಿಡಿ ಸತ್ಯನಾರಾಯಣ ಗೌಡ ಅವರು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮಧುರೆ ಶನಿಮಹಾತ್ಮ ದೇವಾಲಯದ ಕಾರ್ಯದರ್ಶಿಯಾಗಿದ್ದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಪಿಲ್ಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, 1996 ರಲ್ಲಿ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದರು.
ಮೃತರು ಮಡದಿ, ಮಕ್ಕಳನ್ನು ಅಗಲಿದ್ದು ಚನ್ನದೇವಿ ಅಗ್ರಹಾರದಲ್ಲಿ ಇಂದು ಮಧ್ಯಾಹ್ನ 2ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಸಿಡಿ ಸತ್ಯನಾರಾಯಣ ಗೌಡ ಅಗಲಿಕೆ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಸದಸ್ಯ ಜಿ.ಲಕ್ಷ್ಮೀಪತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಪಿ ಜಗನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ನಿರ್ದೇಶಕರಾದ ಅಂಜನಮೂರ್ತಿ, ರಾಮಣ್ಣ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್ ಕಂಬನಿ ಮಿಡಿದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

