ಬೆಂಗಳೂರು, (ಜುಲೈ.31): ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ಪರ- ವಿರೋಧದ ಮಾತುಗಳು ಕೇಳಿಬಂದಿದೆ.

ಕಳೆದ ವಾರ ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆರೋಪಿಸಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದು, ಈ ವೇಳೆ ಶಾಂತಿ ಕದಡುವಿಕೆ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನ ಪೊಲೀಸರು ಬಂಧಿಸಿದ್ದರು.

ಈ ವೇಳೆ ಪೊಲೀಸರು ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ 10ಗಂಟೆಗೆ ಬಸವೇಶ್ವರ ನಗರದ ಪೊಲೀಸ್ ಠಾಣೆ ಆವರಣದಲ್ಲಿ ಪ್ರತಿಭಟನೆ ನಡೆಯಲಿದ್ದು, ಹಿಂದೂಪರ ಸಂಘಟನೆಗಳು ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
