ಬೆಂಗಳೂರು ನಗರ ಜಿಲ್ಲೆ, (ಜುಲೈ.30): ಬಡವರು, ಅಲೆಮಾರಿಗಳು, ನಿರ್ಗತಿಕರು, ಅಸಂಘಟಿತ ಕಾರ್ಮಿಕರು ವಾಸಿಸುವ ಸ್ಥಳಗಳಲ್ಲಿ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ ಬಲಿಯಾಗುತ್ತಿದ್ದು. ಇಂತಹ ಹೀನ ಕೃತ್ಯಗಳನ್ನು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ನಾವು ನೀಡುವ ಕೊಡುಗೆ ಬಗ್ಗೆ ಅವಲೋಕನ ಮಾಡುವುದು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಸತ್ರ ನ್ಯಾಯಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಸದಸ್ಯರಾದ ಎಂ.ಎಲ್ ರಘುನಾಥ್ ಅವರು ಅಭಿಪ್ರಾಪಟ್ಟರು.

ಇಂದು ಎಂ.ಎಚ್.ಮರೀಗೌಡ ರಸ್ತೆಯಲ್ಲಿರುವ ಸಂಭ್ರಮ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನೆಡೆದ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ 2024ರ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತಾನಾಡಿದರು.

ಅತ್ಯಂತ ಬಡ ವ್ಯಕ್ತಿಗಳು, ಅವಿದ್ಯಾವಂತರು, ವಿಕಲಚೇತನರನ್ನು ಗುರುತಿಸಿ ಅವರಿಗೆ ಆಸೆ ಆಮಿಷಗಳನ್ನು ಒಡ್ಡಿ ಅಪಹರಣ ಮಾಡುವುದು. ಮಹಿಳೆಯರನ್ನು ದೈಹಿಕ ಮತ್ತು ಲೈಂಗಿಕವಾಗಿ ಶೋಷಣೆ ಮಾಡಿ ಮಾನವ ಕಳ್ಳ ಸಾಗಣಿಕೆ ಮಾಡುಲಾಗುತ್ತಿದ್ದು ಇದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಸಂತ್ರತ್ಥರಿಗೆ ಸಮಾಜಿಕ ಸಮಾನತೆ ದೊರಕಿಸಬೇಕೆಂದು ತಿಳಿಸಿದರು.
ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್ ಸಿದ್ದೇಶ್ವರ್ ಅವರು ಮಾತಾನಾಡಿ ಇಂದು ರಾಜ್ಯದ 10ನೇ ರಾಜ್ಯ ಮಟ್ಟದ ಮಾನವ ಕಳ್ಳ ಸಾಗಣಿಕೆ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಮಾನವ ಕಳ್ಳ ಸಾಗಾಣಿಕೆಯಲ್ಲಿ ವಯಸ್ಕರರು ಮತ್ತು ಮಕ್ಕಳು, ಮಹಿಳೆಯರು ಮತ್ತು ವಯೋವೃದ್ದರೆನ್ನದೇ ಎಲ್ಲರನ್ನು ಅಪಹರಣ ಮಾಡುತ್ತಿದ್ದಾರೆ. ಆರೋಗ್ಯವಂತ ಮಕ್ಕಳನ್ನು ಅಂಗಾಂಗ ವೈಪಲ್ಯರನ್ನಾಗಿ ಮಾಡಿ ಬಿಕ್ಷೆ ಬೇಡಲು ಕಳುಹಿಸುತ್ತಿದ್ದಾರೆ. ಅಂತವರನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಹಾಗೂ ಸಾರ್ವಜನಿಕರಿಗೆ ಮಾನವ ಕಳ್ಳ ಸಾಗಣಿಕೆಯ ಬಗ್ಗೆ ಅರಿವನ್ನು ಮೂಡಿಸಬೇಕು ಎಂದು ತಿಳಿಸಿದರು.
ಮಾನವ ಕಳ್ಳ ಸಾಗಾಣಿಕೆ ರಾಜ್ಯ ಉನ್ನತ ಸಮಿತಿ ಸದಸ್ಯರಾದ ವಿಲಿಯಂ ಕೃಷ್ಣಪ್ಪ ಅವರು ಮಾತಾನಾಡಿ, 2024ನೇ ಸಾಲಿನಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 1753 ಸಂತ್ರತ್ಥರನ್ನು ಕಾಪಾಡಿ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲಾಗಿದೆ ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಅಪರ ಜಿಲ್ಲಾಧಿಕಾರಿಗಳಾದ ಟಿ.ಎನ್. ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿಗಳಾದ ನ್ಯಾ.ಶ್ರೀಧರ್ ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರಾದ ಪುಷ್ಪಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಅಂಗನಾವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ಧರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
