ಮಾನವ ಕಳ್ಳ ಸಾಗಣಿಕೆಯ ಬಗ್ಗೆ ಅರಿವು ಮೂಡಿಸಿ: ನ್ಯಾ ಎಂ.ಎನ್ ರಘುನಾಥ್

ಬೆಂಗಳೂರು ನಗರ ಜಿಲ್ಲೆ, (ಜುಲೈ.30): ಬಡವರು, ಅಲೆಮಾರಿಗಳು, ನಿರ್ಗತಿಕರು, ಅಸಂಘಟಿತ ಕಾರ್ಮಿಕರು ವಾಸಿಸುವ ಸ್ಥಳಗಳಲ್ಲಿ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ  ಬಲಿಯಾಗುತ್ತಿದ್ದು. ಇಂತಹ ಹೀನ ಕೃತ್ಯಗಳನ್ನು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ನಾವು ನೀಡುವ ಕೊಡುಗೆ ಬಗ್ಗೆ ಅವಲೋಕನ ಮಾಡುವುದು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಸತ್ರ ನ್ಯಾಯಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಸದಸ್ಯರಾದ ಎಂ.ಎಲ್ ರಘುನಾಥ್  ಅವರು  ಅಭಿಪ್ರಾಪಟ್ಟರು.

ಇಂದು ಎಂ.ಎಚ್.ಮರೀಗೌಡ ರಸ್ತೆಯಲ್ಲಿರುವ ಸಂಭ್ರಮ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ  ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನೆಡೆದ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ 2024ರ ಕಾರ್ಯಕ್ರಮವನ್ನು  ಉದ್ಘಾಟಸಿ ಅವರು ಮಾತಾನಾಡಿದರು. 

ಅತ್ಯಂತ ಬಡ ವ್ಯಕ್ತಿಗಳು, ಅವಿದ್ಯಾವಂತರು, ವಿಕಲಚೇತನರನ್ನು ಗುರುತಿಸಿ ಅವರಿಗೆ ಆಸೆ ಆಮಿಷಗಳನ್ನು ಒಡ್ಡಿ ಅಪಹರಣ ಮಾಡುವುದು. ಮಹಿಳೆಯರನ್ನು ದೈಹಿಕ ಮತ್ತು ಲೈಂಗಿಕವಾಗಿ ಶೋಷಣೆ ಮಾಡಿ ಮಾನವ ಕಳ್ಳ ಸಾಗಣಿಕೆ ಮಾಡುಲಾಗುತ್ತಿದ್ದು ಇದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಸಂತ್ರತ್ಥರಿಗೆ ಸಮಾಜಿಕ ಸಮಾನತೆ ದೊರಕಿಸಬೇಕೆಂದು  ತಿಳಿಸಿದರು.

ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ನಿರ್ದೇಶಕರಾದ ಎನ್ ಸಿದ್ದೇಶ್ವರ್ ಅವರು ಮಾತಾನಾಡಿ ಇಂದು ರಾಜ್ಯದ 10ನೇ ರಾಜ್ಯ ಮಟ್ಟದ ಮಾನವ ಕಳ್ಳ ಸಾಗಣಿಕೆ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು  ಮಾನವ ಕಳ್ಳ ಸಾಗಾಣಿಕೆಯಲ್ಲಿ  ವಯಸ್ಕರರು ಮತ್ತು ಮಕ್ಕಳು, ಮಹಿಳೆಯರು  ಮತ್ತು ವಯೋವೃದ್ದರೆನ್ನದೇ ಎಲ್ಲರನ್ನು ಅಪಹರಣ ಮಾಡುತ್ತಿದ್ದಾರೆ. ಆರೋಗ್ಯವಂತ ಮಕ್ಕಳನ್ನು ಅಂಗಾಂಗ ವೈಪಲ್ಯರನ್ನಾಗಿ ಮಾಡಿ ಬಿಕ್ಷೆ ಬೇಡಲು ಕಳುಹಿಸುತ್ತಿದ್ದಾರೆ. ಅಂತವರನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಹಾಗೂ ಸಾರ್ವಜನಿಕರಿಗೆ ಮಾನವ ಕಳ್ಳ ಸಾಗಣಿಕೆಯ ಬಗ್ಗೆ ಅರಿವನ್ನು  ಮೂಡಿಸಬೇಕು ಎಂದು ತಿಳಿಸಿದರು.

ಮಾನವ ಕಳ್ಳ ಸಾಗಾಣಿಕೆ ರಾಜ್ಯ ಉನ್ನತ ಸಮಿತಿ ಸದಸ್ಯರಾದ ವಿಲಿಯಂ ಕೃಷ್ಣಪ್ಪ ಅವರು ಮಾತಾನಾಡಿ, 2024ನೇ ಸಾಲಿನಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 1753 ಸಂತ್ರತ್ಥರನ್ನು ಕಾಪಾಡಿ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲಾಗಿದೆ ಎಂದು  ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಅಪರ ಜಿಲ್ಲಾಧಿಕಾರಿಗಳಾದ ಟಿ.ಎನ್. ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿಗಳಾದ ನ್ಯಾ.ಶ್ರೀಧರ್ ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರಾದ ಪುಷ್ಪಲತಾ ಹಾಗೂ ಜಿಲ್ಲಾ ಮಟ್ಟದ  ಅಧಿಕಾರಿಗಳು ಸೇರಿದಂತೆ ಅಂಗನಾವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ಧರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]